ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮಳೆ ಅಡ್ಡಿ
ಬೆಂಗಳೂರು ;- ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡಲು ನಿರಾಕರಿಸಿರುವ ಕೇಂದ್ರದ ವಿರುದ್ಧ ಕಾಂಗ್ರೆಸ್ ಕೈಗೊಂಡಿದ್ದ ಪ್ರತಿಭಟನೆಗೆ ಮಳೆರಾಯ ಅಡ್ಡಿಯಾಗಿದ್ದಾನೆ. ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು 9 ಗಂಟೆ ಸಮಯಕ್ಕೆ ಮಳೆ ಆರಂಭವಾಗಿದೆ.
ಬೆಂಗಳೂರಿನಾದ್ಯಂತ ನಿಧಾನವಾಗಿ ಆರಂಭವಾದ ಮಳೆ ಈ ಭಾಗದಲ್ಲಿ ಹೆಚ್ಚಾಗಿ ಅಬ್ಬರಿಸುತ್ತಿದೆ.
ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದ್ದನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಕಾಂಗ್ರೆಸ್ ಪ್ರತಿಭಟನೆಗೆ ಮಳೆಯ ಅಡ್ಡಿ ಎದುರಾಗಿದೆ. ಫ್ರಿಡಂ ಪಾರ್ಕ್ನಲ್ಲಿ ಹಾಕಿದ್ದ ಶಾಮಿಯಾನ, ವೇದಿಕೆ, ಚೇರ್ ಎಲ್ಲವೂ ಮಳೆ ನೀರಿನಿಂದ ಸಂಪೂರ್ಣ ಒದ್ದೆಯಾಗಿದೆ.