ಪೊಲೀಸ್ ಸ್ಟೇಶನ್ ಮೆಟ್ಟಿಲೇರಿದ ರಜನಿಕಾಂತ್ ಪುತ್ರಿ

0

ಳೆದ ತಿಂಗಳಷ್ಟೇ ಸೂಪರ್ ಸ್ಟಾರ್ ರಜನಿಕಾಂತ್ ಮೊದಲ ಪುತ್ರಿ ಐಶ್ವರ್ಯ ತಮ್ಮ ಮನೆಯಲ್ಲಿ ಕಳ್ಳತನವಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಇದೀಗ ಎರಡನೇ ಪುತ್ರಿ ಸೌಂದರ್ಯ ಕೂಡ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ.

ರಜನಿಕಾಂತ್ ಎರಡನೇ ಪುತ್ರಿ ಸೌಂದರ್ಯ ಸದ್ಯ ಚೆನ್ನೈನ ತೇನಾಂಪೇಟೆ ಪೊಲೀಸ್ ಠಾಣೆ ಮೆಟ್ಟಿಲೇರಿದು ತಮ್ಮ ಐಷಾರಾಮಿ ಕಾರಿನ ಕೀ ಹುಡುಕಿಕೊಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

ಏಪ್ರಿಲ್ 22 ರಂದು ತಮ್ಮ ದುಬಾರಿ ಕಾರಿನ ಕೀ ಕಳೆದು ಹೋಗಿದ್ದು, ಅದನ್ನು ಹುಡುಕಿಕೊಡುವಂತೆ ದೂರು ದಾಖಲಿಸಿದ್ದಾರೆ.

ಏಪ್ರಿಲ್ 22 ರಂದು ಕಾಲೇಜೊಂದರ ಕಾರ್ಯಕ್ರಮಕ್ಕೆ ಅತಿಥಿಯಾಗಿ ಹೋಗಿದ್ದ ಸೌಂದರ್ಯ ಈ ವೇಳೆ ರೇಂಜ್ ರೋವರ್ ಕಾರಿನ ಕೀ ಕಳೆದುಕೊಂಡಿದ್ದಾರೆ. ವಿಷಯ ಗೊತ್ತಾದ ಕೂಡಲೇ ಸೌಂದರ್ಯ ಪೊಲೀಸ್ ಠಾಣೆಗೆ ದೂರು ನೀಡಿ ಕೀ ಹುಡುಕಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed