ಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದಾರೆಂಬುದು ಸುಳ್ಳು: ಸಚಿವ ಆರಗ ಜ್ಞಾನೇಂದ್ರ

0

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ ಎಂಬ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ. ಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದಾರೆಂಬುದು ಸುಳ್ಳು. ಎಚ್.ಡಿ ಕುಮಾರಸ್ವಾಮಿ ಹಸಿ ಸುಳ್ಳು ಹೇಳುವುದರ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ. ಕುಮಾರಸ್ವಾಮಿ ನನ್ನ ಮೇಲೆ ಮಾಡಿದ ಆರೋಪ ಸಾಬೀತುಪಡಿಸಬೇಕು ಎಂದು  ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿಯವರು, ಅತ್ಯಂತ ಬೇಜವಾಬ್ದಾರಿಯಿಂದ ಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳನ್ನು ಹೇಳುವುದರ ಮೂಲಕ ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ವೇದ್ಯವಾಗುತ್ತದೆ. ಕುಮಾರಸ್ವಾಮಿಯವರು ನನ್ನ ಮೇಲೆ ಮಾಡಿದ ಆಪಾದನೆಯನ್ನು ಸಾಬೀತು ಪಡಿಸಬೇಕು.

ಸಾಂಟ್ರೋ ರವಿಯ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಿ ವಿಚಾರಣೆ ಮಾಡಿ ಎಂದು ಪೊಲೀಸರಿಗೆ ತಿಳಿಸಿದ್ದೇನೆ. ನನ್ನ ಮನೆಯಲ್ಲಿ ಆತ ಹಣದ ಗಂಟನ್ನು ಬಿಚ್ಚಿದ್ದಾನೆ ಎಂದು ಕುಮಾರಸ್ವಾಮಿ ಸತ್ಯಕ್ಕೆ ಅಪಚಾರವಾಗುವಂತಹ ಆಪಾದನೆ ಮಾಡಿದ್ದಾರೆ. ನನ್ನನ್ನು ಯಾವ ಕಾರಣದಿಂದ ತೇಜೋವಧೆ ಮಾಡುತ್ತಿದ್ದಾರೆ, ಎಂದು ತಿಳಿದಿಲ್ಲ. ಇದರಿಂದ ಅವರಿಗೆ ಯಾವ ರೀತಿ ಲಾಭವಾಗುತ್ತದೆ ಗೊತ್ತಿಲ್ಲ. ಗೃಹ ಸಚಿವನಾದ ನನ್ನನ್ನು ಸಮಾಜದ ಕಟ್ಟಕಡೆಯ ಜನರೂ ಒಳಗೊಂಡಂತೆ ದಿನನಿತ್ಯ ನೂರಾರು ಮಂದಿ ಭೇಟಿ ಮಾಡುತ್ತಾರೆ. ಪ್ರತಿಯೊಬ್ಬರ ಹಿನ್ನೆಲೆಯನ್ನೂ ಸೋಸಿ ನೋಡಲಾಗುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed