ಬಿಟ್ ಕಾಯಿನ್ ಹಗರಣದ ಮರು ತನಿಖೆ ವಿಚಾರ

0

ಬೆಂಗಳೂರು ;- ಬಿಟ್ ಕಾಯಿನ್ ಹಗರಣದ ಮರು ತನಿಖೆ ಕುರಿತಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಬೆಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಈಗಾಗಲೇ ತನಿಖೆಯಾಗಿ ಪ್ರಾಥಮಿಕ ಆರೋಪಪಟ್ಟಿ ಸಲ್ಲಿಸಿರುವುದು ಒಂದು ಹಂತ.

ಆದರೆ, ಇದರಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ಸ್ ಪಾತ್ರವಿದೆ. ಸರ್ಕಾರದ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಸಹ ಹ್ಯಾಕ್ ಮಾಡಲಾಗಿದೆ. ಆದ್ದರಿಂದ ಹೆಚ್ಚಿನ ತನಿಖೆಯಾಗಬೇಕು ಎಂದು ಮನವಿ ಮಾಡಿದ್ದೇವೆ. ಯಾರಿಂದ ತನಿಖೆಯಾಗಬೇಕು ಎಂಬುದು ಸರ್ಕಾರ ಮತ್ತು ಡಿಜಿ & ಐಜಿಪಿ ಅವರ ಮಟ್ಟದಲ್ಲಿ ನಿರ್ಧಾರವಾಗಲಿದೆ’ ಎಂದರು.

ಇನ್ನೂ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ಬಿಟ್ ಕಾಯಿನ್ ಪ್ರಕರಣವನ್ನ ಉನ್ನತಮಟ್ಟದ ತನಿಖೆಗೊಳಪಡಿಸುವಂತೆ ರಾಜ್ಯ ಡಿಜಿ & ಐಜಿಪಿ ಅಲೋಕ್ ಮೋಹನ್​ರಿಗೆ ಬೆಂಗಳೂರು ಪೊಲೀಸ್ ಇಲಾಖೆ ಪತ್ರ ಬರೆದಿದೆ.

ಹಗರಣದ ಹಿಂದೆ ಅಂತಾರಾಷ್ಟ್ರೀಯ ಮಟ್ಟದ ವಂಚನೆ ಜಾಲವಿರುವ ಸಂಶಯ ಹಾಗೂ ಪರಿಣಿತ ವಿಧಿ ವಿಧಾನಗಳಿಂದ ಕೃತ್ಯ ಎಸಗಿರುವುದರಿಂದ ಪ್ರಕರಣದ ತನಿಖೆಯನ್ನ ವಿಶೇಷ ತನಿಖಾ ತಂಡಕ್ಕೆ ವಹಿಸುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.

About Author

Leave a Reply

Your email address will not be published. Required fields are marked *

You may have missed