ಖ್ಯಾತ ನೇತ್ರ ತಜ್ಞ ಡಾಕ್ಟರ್ ಭುಜಂಗ ಶೆಟ್ಟಿ ವಿಧಿವಶ

0

ಬೆಂಗಳೂರು: 69 ವರ್ಷದ ಖ್ಯಾತ ನೇತ್ರ ತಜ್ಞ ಡಾಕ್ಟರ್ ಭುಜಂಗ ಶೆಟ್ಟಿ ಅವರು ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ತಕ್ಷಣ ಅವರನ್ನು ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.

 

1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದಿದ್ದ ಅವರು 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮೀಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದ ರೆಸಿಡೆನ್ಸಿ ಮಾಡಿದರು.

80 ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ಪ್ರಾರಂಭಿಸಿ ತದ ನಂತರ ಕರ್ನಾಟಕದ ಅತಿದೊಡ್ಡ ನಾರಾಯಣ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಸ್ಥಾಪಿಸಿದರು. ಅವರು ತಜ್ಞ ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿದ್ದರು.

About Author

Leave a Reply

Your email address will not be published. Required fields are marked *

You may have missed