ರೇವಾ ಕಾಲೇಜಿನಲ್ಲಿ ವಿದ್ಯಾರ್ಥಿ ಕೊಲೆ ಕೇಸ್: ಮತ್ತಿಬ್ಬರು ಆರೋಪಿಗಳು ಅರೆಸ್ಟ್

0

ಬೆಂಗಳೂರು: ರಾಜಧಾನಿ ಬೆಂಗಳೂರಿನ ರೇವಾ ಕಾಲೇಜಿನ (Reva College, Bangalore)ಫೆಸ್ಟಿವಲ್ ವೇಳೆ ವಿದ್ಯಾರ್ಥಿಯನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಬಾಗಲೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾ ಗಿದ್ದಾರೆ.

ಚಾಕು ಇರಿದಿದ್ದ ಅನಿಲ್ ಮತ್ತು ಗಲಾಟೆ ಮಾಡಿದ್ದ ಮತ್ತೊಬ್ಬ ಆರೋಪಿ ಶೃಂಗ ಎಂಬಾತನನ್ನು ಬಂಧಿಸಲಾಗಿದೆ. ಕಳೆದ 28ರಂದು ರೇವಾ ಕಾಲೇಜಿನಲ್ಲಿ(Reva College, Bangalore) ಎರಡು ದಿನಗಳ ರೇವೋತ್ಸವ ಹೆಸರಲ್ಲಿ ಕಾಲೇಜು ಫೆಸ್ಟ್‌ ಅನ್ನು ಆಯೋಜಿಸಲಾಗಿತ್ತು.

ಎಲ್ಲರೂ ಖುಷಿ ಖುಷಿಯಾಗಿ ಕುಣಿದು ಕುಪ್ಪಳಿಸಿದ್ದಾಗಲೇ, ಅಲ್ಲಿ ವಿದ್ಯಾರ್ಥಿಗಳ ಗುಂಪಿನ ನಡುವೆ ಗಲಾಟೆ ನಡೆದು ನೆತ್ತರು ಹರಿದಿತ್ತು. ಗಲಾಟೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್‌ ಓದುತ್ತಿದ್ದ ಗುಜರಾತ್ ಮೂಲದ ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಎಂಬಾತ ಹತ್ಯೆ ಆಗಿ ಹೋಗಿದ್ದ. ಪ್ರಕರಣ ಸಂಬಂಧ ಕಳೆದ ಭಾನುವಾರವೇ ಭರತೇಶ್‌ನನ್ನು ಬಂಧಿಸಲಾಗಿತ್ತು. ಕಾಲೇಜು ಕಾರ್ಯಕ್ರಮದಲ್ಲಿ ಆರೋಪಿ ಭರತೇಶ್ ಮತ್ತು ಮೃತ ಭಾಸ್ಕರ್‌ ಜೆಟ್ಟಿ ನಡುವೆ ಗಲಾಟೆ ನಡೆದಿತ್ತು.

About Author

Leave a Reply

Your email address will not be published. Required fields are marked *

You may have missed