ಮೂರನೇ ಏಕದಿನ ಪಂದ್ಯದಲ್ಲಿ ಶತಕ ಚಚ್ಚಿದ ರೋಹಿತ್ ಶರ್ಮಾ, ಶುಭ್ ಮನ್ ಗಿಲ್

0

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್‌ ಗಿಲ್ ಬಾರಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಟೀಂ ಇಂಡಿಯಾ, ನ್ಯೂಜಿಲೆಂಡ್ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ಟೀಂ ಇಂಡಿಯಾ ಆರಂಭಿಕರಿಬ್ಬರು ಶತಕ ಸಿಡಿಸಿ ವಿಕೆಟ್ ಒಪ್ಪಿಸಿದ್ದು, 28 ಓವರ್ ಅಂತ್ಯದ ವೇಳೆಗೆ ಭಾರತ 2 ವಿಕೆಟ್ ಕಳೆದುಕೊಂಡು 230 ರನ್ ಕಲೆಹಾಕಿದೆ.

 

ಇಲ್ಲಿನ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ ಭರ್ಜರಿ ಆರಂಭವನ್ನೇ ಪಡೆದಿದೆ. ಬ್ಯಾಟರ್‌ಗಳ ಪಾಲಿಗೆ ಸ್ವರ್ಗ ಎನಿಸಿಕೊಂಡಿರುವ ಬ್ಯಾಟಿಂಗ್‌ ಸ್ನೇಹಿ ಪಿಚ್‌ನಲ್ಲಿ ಟೀಂ ಇಂಡಿಯಾ ಆರಂಭಿಕರಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಸ್ಪೋಟಕ ಆರಂಭವನ್ನೇ ಒದಗಿಸಿಕೊಟ್ಟರು.

ಆರಂಭದಲ್ಲಿಯೇ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಈ ಜೋಡಿ ಕೇವಲ 13 ಓವರ್‌ಗಳನ್ನು ಎದುರಿಸಿ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಇದು ಟೀಂ ಇಂಡಿಯಾ ಪರ ಶುಭ್‌ಮನ್‌ ಗಿಲ್‌ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಿ ಮೂರನೇ ಬಾರಿಗೆ ಮೂರಂಕಿ ಮೊತ್ತದ ಜತೆಯಾಟವಾಡುವಲ್ಲಿ ಯಶಸ್ವಿಯಾದರು. ಇದಾದ ಬಳಿಕವೂ ಈ ಜೋಡಿ ಕಿವೀಸ್‌ ಬೌಲರ್‌ಗಳನ್ನು ಮನಬಂದಂತೆ ದಂಡಿಸುವ ಮೂಲಕ ಪ್ರವಾಸಿ ಪಡೆಯನ್ನು ತಬ್ಬಿಬ್ಬಾಗುವಂತೆ ಮಾಡಿದರು.

About Author

Leave a Reply

Your email address will not be published. Required fields are marked *

You may have missed