ಆಡಳಿತದಲ್ಲಿ ನಾಗರಿಕರ ಪಾತ್ರ ಹೆಚ್ಚಾಗಬೇಕಿದೆ: ಪೃಥ್ವಿ ರೆಡ್ಡಿ

0

ಬೆಂಗಳೂರು: ಆಡಳಿತದಲ್ಲಿ ನಾಗರಿಕರ ಪಾತ್ರ ಹೆಚ್ಚಾಗಬೇಕಿದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು, ಇಂದಿನ ರಾಜಕಾರಣದಲ್ಲಿ ಜಾತಿವ್ಯವಸ್ಥೆ ,ಭ್ರಷ್ಟಾಚಾರ, ಗೆಲುವಿಗಾಗಿ ದುಂದುವೆಚ್ಚು ಮಾಡುವುದು,ವಿವಿಧ ಹಗರಣಗಳಲ್ಲಿ ಜನಪ್ರತಿನಿಧಿಗಳು ಭಾಗಿಯಾಗುತ್ತಿರುವುದು.

ಹೀಗಾಗಿ ರಾಜಕೀಯ ವ್ಯವಸ್ಥೆ ತೀರಾ ಹದಗೆಟ್ಟಿದೆ.ತಮ್ಮೊಂದಿಗೆ ಕೆಲಸ ಮಾಡುವ ನೆರೆಹೊರೆಯವರು, ಅಪಾರ್ಟ್‌ಮೆಂಟ್‌ ಭದ್ರತಾ ಸಿಬ್ಬಂದಿ, ಕೆಲಸಗಾರರು,

ಚಾಲಕರು ಸೇರಿದಂತೆ ಎಲ್ಲರ ಜೊತೆ ಚರ್ಚಿಸುವ ಅವಕಾಶವಿದೆ. ಅವರು ಇದನ್ನು ಸದುಪಯೋಗ ಪಡಿಸಿಕೊಂಡು ರಾಜಕೀಯವನ್ನು ಸ್ವಚ್ಛಗೊಳಿಸಲು ಮುಂದಾಗಬೇಕು ಎಂದು ಹೇಳಿದರು.ಸರ್ಕಾರದ ನೀತಿಗಳ ಬಗ್ಗೆ ಚರ್ಚೆಯಾಗುವುದಕ್ಕಿಂತ ಮುಖ್ಯವಾಗಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಹೆಚ್ಚು ಚರ್ಚೆಯಾಗಬೇಕಿದೆ. ಸರ್ಕಾರದ ಆಡಳಿತ ಹಾಗೂ ಜನರ ನಡುವೆ ಹೆಚ್ಚಿನ ಅಂತರವಿದ್ದು, ಇವೆರಡರ ನಡುವೆ ಸೇತುವೆ ನಿರ್ಮಿಸುವ ಕೆಲಸ ಆಗಬೇಕಿದೆ. ಆಗ ಮಾತ್ರ ಜನಸಾಮಾನ್ಯರ ನಿಜವಾದ ಸಮಸ್ಯೆಗಳಿಗೆ ಸರ್ಕಾರದ ಸ್ಪಂದನೆ ಸಾಧ್ಯವಾಗುತ್ತದೆ ಎಂದು ಪೃಥ್ವಿ ರೆಡ್ಡಿ ಅಭಿಪ್ರಾಯಪಟ್ಟರು

About Author

Leave a Reply

Your email address will not be published. Required fields are marked *

You may have missed