ಹೆಣ್ಣು ಮಕ್ಕಳನ್ನು ಬಳಸಿಕೊಂಡು ಸುಲಿಗೆ ಮಾಡುತ್ತಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್

0

ಬೆಂಗಳೂರು: ಬೆಂಗಳೂರಿನ ಸುದ್ಗುಂಟೆಪಾಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ,ಹೆಣ್ಣು ಮಕ್ಕಳನ್ನು ಬಳಸಿಕೊಂಡು ಸುಲಿಗೆ ಮಾಡುತ್ತಿದ್ದ ಲೊಕೆಂಟೋ ಗ್ಯಾಂಗ್​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಯಕ ನಟ ಮಂಜುನಾಥ್, ಲೊಕೆಂಟೋ ಆಯಪ್ ಬಳಸಿಕೊಂಡು ಸುಲಿಗೆ ಮಾಡುತ್ತಿದ್ದ.

ಹುಡುಗಿಯರ ಫೋಟೋ ಬಳಸಿಕೊಂಡು ಲೊಕೇಂಟೋ ಆಯಪ್​ನಲ್ಲಿ ಗ್ರಾಹಕರನ್ನು ಸೆಳೆದು, ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಅಲ್ಲದೆ, ಆನ್​ಲೈನ್​​ ಹಾಗೂ ಮುಖತಃ ಭೇಟಿಯಾಗಿ ಗ್ರಾಹಕರಿಂದ ಹಣ ಪಡೆದುಕೊಳ್ಳುತ್ತಿದ್ದರು. ಈ ಸಂಬಂಧ ಸುದ್ಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ಮಂಜುನಾಥ್ ಸೇರಿದಂತೆ ಆರು ಜನರನ್ನ ಬಂಧಿಸಿದ್ದಾರೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಿ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಕಾಮುಕರ ಅಡ್ಡೆಯಾಗಿರುವ ಲೊಕೆಂಟೋ ಆಯಪ್​ ಬಳಸಿಕೊಂಡು ನಟನೆ ಬಿಟ್ಟು ನಟ ಮಂಜುನಾಥ್ ಹೆಣ್ಣು ಮಕ್ಕಳ ದಂಧೆಗಿಳಿದಿದ್ದ. 2019ರಲ್ಲಿ ಬಿಡುಗಡೆಯಾಗಿದ್ದ ನ್ಯೂರಾನ್ ಎಂಬ ಚಿತ್ರದಲ್ಲಿ ಯುವ ಎಂಬ ಹೆಸರಿನಲ್ಲಿ ಪರಿಚಯ ಮಾಡಿಕೊಂಡಿದ್ದ. ಈ ಚಿತ್ರದ ನಾಯಕನೇ ಪ್ರಮುಖ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed