ಸ್ಯಾಂಡಲ್ ವುಟ್ ನಟಿ ಮಾನ್ವಿತಾ ತಾಯಿ ನಿಧನ

0

ಸ್ಯಾಂಡಲ್ ವುಡ್ ನಟಿ ಮಾನ್ವಿತಾ ಕಾಮತ್ ತಾಯಿ ನಿಧನರಾಗಿದ್ದಾರೆ. ಹಲವು ಸಮಯದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮಾನ್ವಿತಾ ತಾಯಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

 

ಮಾನ್ವಿತಾ ಕಾಮತ್ ತಾಯಿ ಸುಜಾತಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅವರಿಗೆ ಕಿಡ್ನಿ ಕಸಿ ಮಾಡಿಸಲಾಗಿತ್ತು ಎನ್ನಲಾಗಿದೆ. ಇದಲ್ಲದೆ ಈ ಹಿಂದೆ ಎರಡು ಬಾರಿ ಹೃದಯಾಘಾತವಾಗಿತ್ತು. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸುಜಾತಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಒಂದು ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದರು. ತಾಯಿಯನ್ನು ಉಳಿಸಿಕೊಳ್ಳಲು ಮಾನ್ವಿತ ಲಕ್ಷ ಲಕ್ಷ ಖರ್ಚು ಚಿಕಿತ್ಸೆ ಕೊಡಿಸಿದ್ದರು ಯಾವುದೇ ಪ್ರಯೋಜನವಾಗದೆ ಕೊನೆಯುಸಿರೆಳೆದಿದ್ದಾರೆ.

ಸುಜಾತಾ ಕಾಮತ್ ಅನಾರೋಗ್ಯ ಉಂಟಾದಾಗ ಬಾಲಿವುಡ್ ನಟ ಸೋನು ಸೂದ್ ಸಹಾಯ ಮಾಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಮಾನ್ವಿತಾ ಕಾಮತ್, ‘ಈಗ ತಾನೇ ಸೋನು ಸೂದ್ ಅವರ ಜತೆ ಮಾತನಾಡಿದೆ. ನನ್ನ ತಾಯಿಗೆ ಅವರು ಮಾಡಿದ ಸಹಾಯಕ್ಕೆ ಧನ್ಯವಾದ ಹೇಳಿದೆ. ನೀವು ನಿಜವಾದ ಹೀರೋ ಸರ್. ಎಲ್ಲದಕ್ಕೂ ಧನ್ಯವಾದ. ನಮ್ಮ ಸಂಕಷ್ಟದಲ್ಲಿ ಏಂಜಲ್ ರೀತಿ ಬಂದಿರಿ. ನಿಮ್ಮಿಂದಾಗಿ ನನ್ನ ತಾಯಿ ಇಂದು ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಮಾನ್ವಿತಾ ಬರೆದುಕೊಂಡಿದ್ದರು. ಆದರೆ ಇದೀಗ ಮಾನ್ವಿತಾ ತಾಯಿ ನಿಧನರಾಗಿದ್ದಾರೆ.

About Author

Leave a Reply

Your email address will not be published. Required fields are marked *

You may have missed