ಭಾರತೀಯರು ಸೇರಿ 150 ಜನರನ್ನು ಸುರಕ್ಷಿತವಾಗಿ ಕರೆತಂದ ಸೌದಿ ಅರೇಬಿಯಾ

0

ಖಾರ್ಟೂಮ್: ಸೇನೆ ಹಾಗೂ ಅರೆಸೇನಾಪಡೆಗಳ ಸಂಘರ್ಷಕ್ಕೆ ಗುರಿಯಾಗಿರುವ ಸುಡಾನ್‌ನಲ್ಲಿ ಸಿಲುಕಿಕೊಂಡಿರುವ ವಿದೇಶಿಗರ ರಕ್ಷಣೆ ಪ್ರಾರಂಭಿಸಲಾಗಿದೆ. ಭಾರತ ಸೇರಿದಂತೆ ಇತರ ದೇಶಗಳ ಸುಮಾರು 150ಕ್ಕೂ ಹೆಚ್ಚು ಜನರನ್ನು ಸುಡಾನ್‌ನಿಂದ ಕರೆತರಲಾಗಿದೆ ಎಂದು ಸೌದಿ ಅರೇಬಿಯಾ ಸರ್ಕಾರ ತಿಳಿಸಿದೆ.

 

ಸೇನೆ ಹಾಗೂ ಅರೆಸೇನೆ ಸಂಘರ್ಷದಲ್ಲಿ ಸುಡಾನ್‌ನಲ್ಲಿರುವ ಭಾರತೀಯರು ಸೇರಿದಂತೆ ವಿವಿಧ ದೇಶಗಳ ಜನರು ತಮ್ಮ ದೇಶಗಳಿಗೆ ಹಿಂತಿರುಗಲು ಪ್ರಯತ್ನಿಸುತ್ತಿದ್ದಾರೆ. ಇದೀಗ ಸಂಘರ್ಷ ಪೀಡಿತ ಸುಡಾನ್‌ನಿಂದ ವಿದೇಶಿ ರಾಜತಾಂತ್ರಿಕರು, ಅಧಿಕಾರಿಗಳು ಸೇರಿದಂತೆ 150ಕ್ಕೂ ಅಧಿಕ ಜನರನ್ನು ಸುಡಾನ್‌ನಿಂದ ರಕ್ಷಿಸಲಾಗಿದೆ ಹಾಗೂ ಎಲ್ಲರನ್ನೂ ಜೆಡ್ಡಾಗೆ ಕರೆತರಲಾಗಿದೆ ಎಂದು ಸೌದಿ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಸೈನ್ಯದ ಇತರ ಶಾಖೆಗಳ ಬೆಂಬಲದೊಂದಿಗೆ ಸೌದಿ ಅರೇಬಿಯಾದ ನೌಕಾಪಡೆಗಳು ನಾಗರಿಕರನ್ನು ಸ್ಥಳಾಂತರಗೊಳಿಸುವ ಕಾರ್ಯವನ್ನು ಮಾಡಿದೆ. ಅದರಲ್ಲಿ 91 ಸೌದಿಯ ನಾಗರಿಕರು ಆಗಮಿಸಿದ್ದು, ಭಾರತ ಸೇರಿದಂತೆ 12 ದೇಶಗಳ ಸುಮಾರು 66 ಪ್ರಜೆಗಳನ್ನೂ ಸುರಕ್ಷಿತವಾಗಿ ಕರೆತರಲಾಗಿದೆ. ಕುವೈತ್, ಕತಾರ್, ಯುನೈಟೆಡ್ ಅರಬ್ ಎಮಿರೇಟ್ಸ್, ಈಜಿಪ್ಟ್, ಟುನೀಶಿಯಾ, ಪಾಕಿಸ್ತಾನ, ಬಲ್ಗೇರಿಯಾ, ಬಾಂಗ್ಲಾದೇಶ, ಫಿಲಿಪೈನ್, ಕೆನಡಾ ಹಾಗೂ ಬುರ್ಕಿನಾ ಫಾಸೋದ ನಾಗರಿಕರನ್ನು ಕೂಡಾ ಸ್ಥಳಾಂತರಿಸಲಾಗಿದೆ ಎಂದು ಸೌಧಿ ಅಧಿಕಾರಿಗಳು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed