ಶ್ವ ನಂ.1 ಇಗಾ ಸ್ವಿಯಾಟೆಕ್ ಟೂರ್ನಿಯಲ್ಲಿ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶ

0

ಲಂಡನ್:‌ ಸತತ 5ನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಸರ್ಬಿಯಾದ ನೋವಾಕ್‌ ಜೋಕೋವಿಚ್‌ ಹಾಗೂ ವಿಶ್ವ ನಂ.1 ಇಗಾ ಸ್ವಿಯಾಟೆಕ್ ವಿಂಬಲ್ಡನ್‌ ಗ್ರ್ಯಾನ್‌ಸ್ಲಾಂ ಟೆನಿಸ್‌ ಟೂರ್ನಿಯಲ್ಲಿ ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಪುರುಷರ ಸಿಂಗಲ್ಸ್‌ 3ನೇ ಸುತ್ತಿನಲ್ಲಿ ಜೋಕೋವಿಚ್ 3 ಬಾರಿ ಗ್ರ್ಯಾನ್‌ಸ್ಲಾಂ ವಿಜೇತ ಸ್ವಿಜರ್‌ಲೆಂಡ್‌ನ ವಾಂವ್ರಿಕಾ ವಿರುದ್ಧ 6-3, 6-1, 7-6(7/5) ಅಂತರದಲ್ಲಿ ಗೆಲುವು ಸಾಧಿಸಿದರು.

ರಷ್ಯಾದ ಡ್ಯಾನಿಲ್‌ ಮೆಡ್ವೆಡೆವ್‌ ಕೂಡಾ 4ನೇ ಸುತ್ತಿಗೇರಿದರು. ಆದರೆ 2 ಬಾರಿ ಚಾಂಪಿಯನ್‌ ಬ್ರಿಟನ್‌ನ ಆಯಂಡಿ ಮರ್ರೆ, ಗ್ರೀಕ್‌ನ ಸ್ಟೆಫಾನೊಸ್‌ ಸಿಟ್ಸಿಪಾಸ್‌ ವಿರುದ್ಧ 2ನೇ ಸುತ್ತಿನಲ್ಲಿ ಸೋತು ಹೊರಬಿದ್ದರು.ಇದಕ್ಕೂ ಮುನ್ನ ಶುಕ್ರವಾರ ರಾತ್ರಿ ಮಹಿಳಾ ಸಿಂಗಲ್ಸ್‌ 3ನೇ ಸುತ್ತಿನಲ್ಲಿ ಪೋಲೆಂಡ್‌ನ ಇಗಾ ಕ್ರೊವೇಷಿಯಾದ ಪೆಟ್ರಾ ಮಾರ್ಟಿಕ್‌ ವಿರುದ್ಧ 6-2, 7-5 ಸುಲಭ ಜಯಗಳಿಸಿದರು. ಬ್ರೆಜಿಲ್‌ನ ಹದ್ದಾದ್‌ ಮಿಯಾ ಕೂಡಾ 4ನೇ ಸುತ್ತು ಪ್ರವೇಶಿಸಿದರು.

About Author

Leave a Reply

Your email address will not be published. Required fields are marked *

You may have missed