SI ಪತ್ನಿ ಅನುಮಾನಾಸ್ಪದ ಸಾವು: ಕುಟುಂಬಸ್ಥರಿಂದ ಕೊಲೆ ಆರೋಪ

0

ಬೆಂಗಳೂರು: ಬೇಗೂರು ಪೊಲೀಸ್​ ಠಾಣೆ ವ್ಯಾಪ್ತಿಯ ಪಟೇಲ್​ ಲೇಔಟ್​ನಲ್ಲಿ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಪತ್ನಿ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ. 33 ವರ್ಷದ ಶಿಲ್ಪಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಸಬ್ ​ಇನ್ಸ್​​ಪೆಕ್ಟರ್​ ರಮೇಶ್​ ಹಾಗೂ ಶಿಲ್ಪಾ ಪ್ರೀತಿಸಿ ವಿವಾಹವಾಗಿದ್ದರು. ಮದುವೆಯಾದ ಬಳಿಕ ದಂಪತಿ ನಡುವೆ ಜಾತಿ ವಿಚಾರಕ್ಕೆ ಕಿತ್ತಾಟವಾಗುತ್ತಿತ್ತು. ಪತ್ನಿ ಪರಿಶಿಷ್ಟ ಜಾತಿಗೆ ಸೇರಿದವಳು ಎಂದು ಪತಿ ನಿಂದಿಸುತ್ತಿದ್ದ ಎಂದು ತಿಳಿದು ಬಂದಿದೆ.

ಈ ಸಂಬಂಧ ರಾಜಿ ಪಂಚಾಯಿತಿ ನಡೆಸಿ ಇಬ್ಬರಿಗೂ ಮದುವೆ ಮಾಡಿಸಲಾಗಿತ್ತು. ಜಾತಿನಿಂದನೆ ವಿಚಾರವಾಗಿ ಸಬ್ ಇನ್ಸ್‌ಪೆಕ್ಟರ್ ರಮೇಶ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿತ್ತು. ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಯುವತಿ ಕುಟುಂಬಸ್ಥರು ನಿನ್ನೆ ರಾತ್ರಿ ನಮ್ಮಗಳ ಜೊತೆ ಫೋನಿನಲ್ಲಿ ಮಾತನಾಡಿ ಖರ್ಚಿಗೆ ಹಣವನ್ನು ಹಾಕಿಸಿಕೊಂಡಿದ್ದರು.

ಆದರೆ, ಇಂದು ಬೆಳಗ್ಗೆ ಮಾಲೀಕರು ಕರೆ ಮಾಡಿ ಮಗಳು ಮನೆಯ ಬಾಗಿಲು ತೆರೆಯುತ್ತಿಲ್ಲ ಎಂದು ಮಾಹಿತಿ ನೀಡಿದ್ದರು. ವಿಷಯ ತಿಳಿದು ನಾವು ಮನೆಗೆ ಭೇಟಿ ನೀಡುವಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ.

ನಮ್ಮ ಮಗಳು ಸಾಯುವ ಮನಸ್ಥಿತಿಯವಳಲ್ಲ ಪತಿ ರಮೇಶ್ ಕೊಲೆ ಮಾಡಿರುವ ಅನುಮಾನವಿದೆ. ಕಾನೂನು ರೀತಿ ತನಿಖೆ ನಡೆಸಿ ನ್ಯಾಯ ಕೊಡಿಸಬೇಕು ಎಂದು ಯುವತಿ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಬೇಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed