ಸಿದ್ದರಾಮಯ್ಯ ಬಜೆಟ್ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ: ಮುರುಗೇಶ್ ನಿರಾಣಿ

0

ಬೆಳಗಾವಿಸಿಎಂ ಸಿದ್ದರಾಮಯ್ಯ ಬಜೆಟ್ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಸಹ ಸುಳ್ಳು ಭರವಸೆ ನೀಡಿದ್ದಾರೆ. ಘೋಷಣೆ ವೇಳೆ ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕಿರಲಿಲ್ಲ. ಈಗ ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸಿದ್ದಾರೆ. ಬಿಜೆಪಿ ಸರ್ಕಾರದ 20ಕ್ಕೂ ಹೆಚ್ಚು ಯೋಜನೆ ಕೈಬಿಟ್ಟಿದ್ದಾರೆ.

ಬಿಜೆಪಿ ಸರ್ಕಾರದ ಯೋಜನೆ ಕೈಬಿಟ್ಟಿದ್ದು ಜನರಿಗೆ ಮಾಡಿದ ಮೋಸ. ಒಂದು ಸಮುದಾಯದ ಓಲೈಕೆಯ ಬಜೆಟ್ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಮುರುಗೇಶ್​ ನಿರಾಣಿ ಹೇಳಿದ್ದಾರೆ.

ಸಿದ್ದರಾಮಯ್ಯ ಬಜೆಟ್ ಮಂಡನೆಗಿಂತ ಬಿಜೆಪಿಗೆ ಬೈಯ್ದಿದ್ದೇ ಹೆಚ್ಚು. ದೇಶದಲ್ಲಿ ಕೊವಿಡ್ ವ್ಯಾಕ್ಸಿನ್ ತಯಾರಿಸಿ ಎಲ್ಲರಿಗೂ ನೀಡಿದ್ದೇವೆ. ವಿದೇಶಗಳಿಗೂ ಕೊಟ್ಟಿದ್ದನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡುತ್ತಾರೆ. ಸಿದ್ದರಾಮಯ್ಯ ಭಾರತ ದ್ವೇಷಿ ರಾಹುಲ್ ಗಾಂಧಿ ರೀತಿ ಮಾತನಾಡುತ್ತಿದ್ದಾರೆ. ಆಸ್ತಿ ದರ ಏರಿಕೆ ಮಾಡಿದ್ದಾರೆ, ಅಬಕಾರಿ ಟಾರ್ಗೆಟ್ ಕೊಟ್ಟಿದ್ದಾರೆ ಎಂದು ಹೇಳಿದರು.

About Author

Leave a Reply

Your email address will not be published. Required fields are marked *

You may have missed