ಕಾಂಗ್ರೆಸ್​ ನಾಯಕರಿಂದ ಮೌನ ಪ್ರತಿಭಟನೆ: ಸರ್ಕಾರದ ವಿರುದ್ಧ ಬೊಮ್ಮಾಯಿ ಕಿಡಿ

0

ಬೆಂಗಳೂರು: ಫ್ರೀಡಂಪಾರ್ಕ್​ನಲ್ಲಿ ಕಾಂಗ್ರೆಸ್​ ನಾಯಕರಿಂದ ಮೌನ ಪ್ರತಿಭಟನೆ ಹಿನ್ನಲೆ ರಾಜಭವನದ ಬಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಂವಿಧಾನ, ‌ಕಾನೂನಿಗೂ ಸಂಬಂಧವಿಲ್ಲ ಎಂಬ ರೀತಿ ವರ್ತಿಸುತ್ತಿದ್ದು, ಕೋರ್ಟ್ ಆದೇಶದ‌ ವಿರುದ್ಧ ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡುತ್ತಿದ್ದಾರೆ.

ಅವರೆಲ್ಲರೂ ಒಂದು ಕುಟುಂಬದ ಸಲುವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಕಿಡಿ ಕಾರಿದರು.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಆರೋಪ ವಿಚಾರವಾಗಿ ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ವಿಪಕ್ಷ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಬಿಜೆಪಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಿದ್ದಾರೆ.

ರಾಜ್ಯಪಾಲರ ಭೇಟಿ ಬಳಿಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ‘ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಜನಸಾಮಾನ್ಯರ ಕೊಲೆಗಳಾಗುತ್ತಿದೆ. ಕೊಲೆಗಡುಕರಿಗೆ ಯಾರ ಭಯವೂ ಇಲ್ಲ. ಆಡಳಿತ ವ್ಯವಸ್ಥೆ ಬದಲಾಗಿದೆ. ಆಡಳಿತ ಪಕ್ಷದಿಂದ ರಕ್ಷಣೆ ಸಿಗುತ್ತದೆ ಎಂಬ ಧೈರ್ಯ ಕೊಲೆಗಡುಕರಿಗೆ ಬಂದಿದೆ. ಸರ್ಕಾರಕ್ಕೆ ಸೂಕ್ತ ಎಚ್ಚರಿಕೆ ಕೊಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.

About Author

Leave a Reply

Your email address will not be published. Required fields are marked *

You may have missed