ಮಣಿಪುರದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ – ಅಮಿತ್ ಶಾ

0

ದೆಹಲಿ ;- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರದಲ್ಲಿ ನಡೆಯುತ್ತಿರುವ ಪರಿಸ್ಥಿತಿ ಕುರಿತು ಶನಿವಾರ ಸರ್ವಪಕ್ಷಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿವಿಧ ಪಕ್ಷಗಳ ಸಲಹೆ ಸೂಚನೆ ಪಡೆದಿದ್ದಾರೆ.

ಬಳಿಕ ಮಾತನಾಡಿದ ಅಮಿತ್ ಶಾ, ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಸೂಕ್ಷ್ಮವಾಗಿ ಮತ್ತು ರಾಜಕೀಯವನ್ನು ಬದಿಗಿಟ್ಟು ತಮ್ಮ ಸಲಹೆಗಳನ್ನು ನೀಡಿವೆ.

ಭಾರತ ಸರ್ಕಾರ ಈ ಸಲಹೆಗಳನ್ನು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಮೊದಲ ದಿನದಿಂದ ಮಣಿಪುರದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಜೂನ್ 13 ರ ತಡರಾತ್ರಿಯಿಂದ ರಾಜ್ಯದಲ್ಲಿ ಹಿಂಸಾಚಾರದಲ್ಲಿ ಒಬ್ಬರೂ ಸಾವನ್ನಪ್ಪಿಲ್ಲ. ರಾಜ್ಯದಲ್ಲಿ 36,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ, 40 ಐಪಿಎಸ್ ಅಧಿಕಾರಿಗಳನ್ನು ಮಣಿಪುರಕ್ಕೆ ಕಳುಹಿಸಲಾಗಿದೆ, 20 ವೈದ್ಯಕೀಯ ತಂಡಗಳನ್ನು ಕಳುಹಿಸಲಾಗಿದ. ಔಷಧಿಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯನ್ನು ಖಾತ್ರಿಪಡಿಸಲಾಗುತ್ತಿದೆ ಎಂದು ಶಾ ಹೇಳಿದ್ದಾರೆ.

ಮೇ ತಿಂಗಳ ಆರಂಭದಲ್ಲಿ ಹಿಂಸಾಚಾರ ಪೀಡಿತ ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ ಅಮಿತ್ ಶಾ ಅವರು ಶಾಂತಿಗಾಗಿ ಮನವಿ ಮಾಡಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ರವಾನೆ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed