ರೇಬಿಸ್ ರೋಗ ತಡೆಗಟ್ಟಲು ಬೀದಿ ನಾಯಿಗಳ ಗಣತಿ ಆರಂಭ

0

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣ ಹಾಗೂ ರೇಬಿಸ್ ರೋಗ ತಡೆಗಟ್ಟಲು ಬೀದಿ ನಾಯಿಗಳ ಗಣತಿ ನಡೆಸುವುದಕ್ಕೆ ಬಿಬಿಎಂಪಿ ಮುಂದಾಗಿದೆ.

ಸಂತಾನ ಹರಣ ಚಿಕಿತ್ಸೆ ಆಗದೇ ಇದ್ದರೇ, ಸಮೀಕ್ಷೆ ಮೂಲಕ ಮುಂದಿನ ದಿನಗಳಲ್ಲಿ ಬೀದಿ ನಾಯಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.

2019 ನೇ ಸಾಲಿನಲ್ಲಿ ಬಿಬಿಎಂಪಿಯಿಂದ ನಡೆದ ಸಮೀಕ್ಷೆಯಲ್ಲಿ ಸುಮಾರು 3.10 ಲಕ್ಷ ಬೀದಿ ನಾಯಿಗಳಿವೆ.

ರೇಬಿಸ್ ರೋಗ ತಡೆಗಟ್ಟಲು ಸಂತಾನ ಶಕ್ತಿ ಹರಣ ಚಿಕಿತ್ಸೆ ನೀಡಲು ಪಾಲಿಕೆ ಮುಂದದಾಗಿದ್ದು, ಇಂದಿನಿಂದ ಗಣತಿದಾರರು ಬೈಕ್‌ ಮೇಲೇರಿ ನಗರದ ಬೀದಿ ಬೀದಿ ಸುತ್ತಲಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರದ ಪಶುಪಾಲನೆ ವಿಭಾಗದಿಂದ 70 ಸಿಬ್ಬಂದಿ ಮತ್ತು ಬಿಬಿಎಂಪಿಯ 30 ಸಿಬ್ಬಂದಿ ಸೇರಿದಂತೆ ಒಟ್ಟು 100 ಮಂದಿ ನಿಯೋಜಿಸಲಾಗಿದೆ.

ಬಿಬಿಎಂಪಿ WVS ಸರ್ವೆ 2023 ಮೊಬೈಲ್ ಆಯಪ್ ಮೂಲಕ ಬೀದಿ ನಾಯಿ ಸಮೀಕ್ಷೆ ನಡೆಸಲಾಗುತ್ತದೆ. ಮೊಬೈಲ್ ಆಯಪ್‌ನಲ್ಲಿ ಬೀದಿ ನಾಯಿ ಫೋಟೋ‌ ತಗೆದು ಫೋಟೋ ಅಪ್ಲೋಡ್ ಮಾಡಲಾಗುತ್ತದೆ.

ಇನ್ನೂ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣ ಹಾಗೂ ರೇಬಿಸ್ ರೋಗ ತಡೆಗಟ್ಟಲು ಲಸಿಕಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಒಟ್ಟು 14 ದಿನಗಳ ಕಾಲ ಲಸಿಕಾ ಹಾಗೂ ಸರ್ವೇ ಕಾರ್ಯ ಮಾಡಲಾಗುತ್ತೆ. 2019ರಲ್ಲಿ ಬೀದಿ ನಾಯಿಗಳ ಸಮೀಕ್ಷೆಯನ್ನು ಮಾಡಿ ಅದರಲ್ಲಿ 3.10 ಲಕ್ಷ ಬೀದಿ ನಾಯಿಗಳು ಇರುವುದಾಗಿ ಅಂದಾಜು ದಾಖಲಾಗಿತ್ತು,

About Author

Leave a Reply

Your email address will not be published. Required fields are marked *

You may have missed