ಕಾಂಗ್ರೆಸ್ ಪಕ್ಷ ಎದುರಿಸುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಿಗಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಸಿದ್ದು ನಿಜ ಕನಸುಗಳು ಎಂಬ ಕೃತಿ ಬಿಡುಗಡೆ ಮಾಡಲು ಹೊರಟಿದ್ದವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸದಾ ಸಿದ್ಧ.

ಸ್ಥಳ ಮತ್ತು ಸಮಯವನ್ನು ಬಿಜೆಪಿ ನಾಯಕರೇ ನಿಗದಿಗೊಳಿಸಿ ನನ್ನನ್ನು ಕರೆಯಲಿ. ಸುಖಾ ಸುಮ್ಮನೆ ಸುಳ್ಳು – ಪೊಳ್ಳು ಬರ್ಕೊಂಡು, ಪೋಟೋಶಾಪ್ ಮಾಡಿಕೊಂಡು ನಿಮ್ಮ ಮಾನ ನೀವೇ ಮಾರಿಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ. ರಾಜಕೀಯವಾಗಿ ನನ್ನನ್ನಾಗಲಿ,

ಕಾಂಗ್ರೆಸ್ ಪಕ್ಷವನ್ನಾಗಲಿ ಎದುರಿಸುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಿಗಿಲ್ಲ. ಇದಕ್ಕಾಗಿ ನನ್ನ ವಿರುದ್ಧದ ಹೋರಾಟವನ್ನೂ ದುಡ್ಡಿಗಾಗಿ ಮಾರಿಕೊಂಡ ಬಾಡಿಗೆ ಬರಹಗಾರರಿಗೆ ಔಟ್ ಸೋರ್ಸ್ ಮಾಡಿದ್ದಾರೆ. ಶೇಮ್ ಆನ್ ಯು. ಚರ್ಚೆ ಸಂವಾದಗಳ ರಾಜಕೀಯದಲ್ಲಿ ನನಗೆ ನಂಬಿಕೆ ಇದೆ. ಇದಕ್ಕಾಗಿಯೇ ಇರುವುದು ವಿಧಾನಮಂಡಲ. ಅಲ್ಲಿ ಚರ್ಚೆ ನಡೆಸುವ ಧೈರ್ಯ ಇಲ್ಲದೇ ಅಧಿವೇಶನವನ್ನೇ ಮೊಟಕುಗೊಳಿಸುತ್ತೀರಿ. ಹೊರಗೆ ಬೀದಿಯಲ್ಲಿ ಬಾಡಿಗೆ ಬರಹಗಾರರನ್ನು ಕಟ್ಟಿಕೊಂಡು ನನ್ನ ಬಗ್ಗೆ ಕಟ್ಟು ಕತೆ ಹೆಣೆಯುತ್ತೀರಿ. ಇದೇನಾ ನಿಮ್ಮ ಸಂಸ್ಕೃತಿ ರಾಜ್ಯ ಬಿಜೆಪಿ? ಎಂದು ಪ್ರಶ್ನಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed