ರಾಜ್ಯಾದ್ಯಂತ ಮತ ಎಣಿಕೆ ಪ್ರಕ್ರಿಯೆ ಆರಂಭ: ಮೊದಲನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

0

ಬೆಂಗಳೂರು: ಮೇ 10ರಂದು ಮತದಾನ ನಡೆದಿದ್ದು ಇಂದು ಜನರ ತೀರ್ಪು ಹೊರ ಬೀಳಲಿದೆ. ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಶುರುವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆಯನ್ನು ಗಳಿಸಿದೆ. ಬೆಂಗಳೂರಿನಲ್ಲಿ ಬೆಂಗಳೂರು ದಕ್ಷಿಣ, ಯಲಹಂಕ, ಮಹದೇವಪುರ, ಯಶವಂತಪುರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು ಒಟ್ಟು 41 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಇದು ಕೇವಲ ಮುನ್ನಡೆಯಷ್ಟೇ ಆಗಿದ್ದು,

ಸಂಪೂರ್ಣವಾಗಿ ಸೋಲು ಅಥವಾ ಗೆಲುವು ಎಂದು ನಿರ್ಧಾರ ಆಗುವುದು ಎಲ್ಲಾ ಮತಗಳನ್ನು ಎಣಿಸಿದ ಮೇಲಷ್ಟೇ, ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.

About Author

Leave a Reply

Your email address will not be published. Required fields are marked *

You may have missed