ಪಂಚ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತ – ಜಿ.ಟಿ.ದೇವೇಗೌಡ

0

ಬೆಂಗಳೂರು ;- ಕಾಮಗಾರಿಗಳಿಗೆ ನೀಡಿರುವ ತಡೆಯಾಜ್ಞೆ ತೆರವು ಮಾಡಿ ಎಂದು ಸರ್ಕಾರಕ್ಕೆ ಶಾಸಕ ಜಿ.ಟಿ.ದೇವೇಗೌಡ ಆಗ್ರಹ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ. ಈಗಾಗಲೇ ಮಂಜೂರಾಗಿದ್ದ ಕೆಲಸಗಳು ಸ್ಥಗಿತಗೊಳ್ಳುತ್ತಿವೆ.

ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮುಂದುವರೆಸಲು ಅವಕಾಶ ಮಾಡಿಕೊಡಬೇಕು. ಶಾಸಕರ ಪ್ರವೇಶಾಭಿವೃದ್ಧಿ ನಿಧಿಯಡಿ ನೀಡಲಾಗುತ್ತಿರುವ 2 ಕೋಟಿ ರೂ.ಗಳನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಯಲ್ಲಿ ಅನುದಾನವಿಲ್ಲ. ಯಾಕೆ ಚುನಾವಣೆ ಮಾಡುತ್ತೀರಿ, ರದ್ದು ಮಾಡಿ ಎಂದು ಗರಂ ಆದರು

About Author

Leave a Reply

Your email address will not be published. Required fields are marked *

You may have missed