ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಸ್ವರಾ ಭಾಸ್ಕರ್
ಬಾಲಿವುಡ್ ನ ಖ್ಯಾತ ನಟಿ ಸ್ವರಾ ಭಾಸ್ವರ್ ಇತ್ತೀಚೆಗೆ ಫಾಹದ್ ಅವರನ್ನು ವಿವಾಹವಾಗುವ ಮೂಲಕ ಅಚ್ಚರಿ ಮೂಡಿಸಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ತಾವು ಫೋಷಕರಾಗುತ್ತಿರುವ ಗುಡ್ ನ್ಯೂಸ್ ಅನ್ನು ಸ್ವರಾ ದಂಪತಿಗಳು ಹಂಚಿಕೊಂಡಿದ್ದಾರೆ.
ಈ ವಿಷಯವನ್ನು ಸ್ವತಃ ಸ್ವರಾ ಭಾಸ್ಕರ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ನಿಮ್ಮೆಲ್ಲ ಪ್ರಾರ್ಥನೆಗಳು ಒಟ್ಟಿಗೆ ನೆರವೇರುತ್ತವೆ. ವಿಶ್ ಮಾಡಿ. ಅಕ್ಟೋಬರ್ ಬೇಬಿ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅಕ್ಟೋಬರ್ ನಲ್ಲಿ ಮಗುವನ್ನು ಮನೆ ತುಂಬಿಸಿಕೊಳ್ಳಲು ಸ್ವರಾ ದಂಪತಿಗಳು ರೆಡಿಯಾಗಿದ್ದಾರೆ.
ಸ್ವರಾ ಭಾಸ್ಕರ್ ಇತ್ತೀಚಿಗೆ ಪೊಲಿಟಿಕಲ್ ಲೀಡರ್ ಫಹಾದ್ ಅಹ್ಮದ್ ಅವರನ್ನ ಮದುವೆಯಾಗಿ ಅಚ್ಚರಿ ಮೂಡಿಸಿದ್ದರು. ಬಹುಕಾಲದ ಗೆಳೆಯನ ಜೊತೆ ಸ್ವರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಬೆನ್ನಲ್ಲೇ ತಮ್ಮ ಮೊದಲ ರಾತ್ರಿಯ ಬೆಡ್ರೂಮ್ ಫೋಟೋವನ್ನ ನಟಿ ಹಂಚಿಕೊಂಡು ಅಚ್ಚರಿ ಮೂಡಿಸಿದ್ದರು.
ಸಮಾಜವಾದಿ ಪಕ್ಷದ ಯುವ ಅಧ್ಯಕ್ಷ ಫಹಾದ್ ಜೊತೆ ಸ್ವರಾ ವಿಶೇಷ ಕಾಯ್ದೆಯಡಿ ಜ.6ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಬಳಿಕ ಇತ್ತೀಚಿಗೆ ತಮ್ಮ ಮದುವೆಯ ಬಗ್ಗೆ ಸ್ವರಾ ಅಧಿಕೃತವಾಗಿ ತಿಳಿಸಿದ್ದರು. ಅಣ್ಣ ಎಂದು ಕರೆದು ಈಗ ಅವರನ್ನೇ ಮದುವೆಯಾಗಿದ್ದೀರಾ ಎಂದು ಟ್ರೋಲ್ ಮಾಡಲಾಯ್ತು. ಆದರೆ ಯಾವುದೇ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳದ ಜೋಡಿ ದಾಂಪತ್ಯ ಜೀವನವನ್ನು ಖುಷಿಯಿಂದ ಎಂಜಾಯ್ ಮಾಡುತ್ತಿದ್ದಾರೆ.