ಹ್ಯಾಂಡಲ್ ಲಾಕ್ ಮುರಿದು ಬೈಕ್ ಕಳ್ಳತನ ಮಾಡ್ತಿದ್ದ ಆರೋಪಿ ಅರೆಸ್ಟ್

0

ಬೆಂಗಳೂರು: ಹ್ಯಾಂಡಲ್ ಲಾಕ್ ಮುರಿದು ಬೈಕ್ ಕಳ್ಳತನ ಮಾಡ್ತಿದ್ದ ಆರೋಪಿ‌ಯನ್ನು ಬೆಂಗಳೂರಿನ ಜ್ಞಾನಭಾರತಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 28 ವರ್ಷದ ಪ್ರಭುದೇವ ಅಲಿಯಾಸ್ ಪ್ರಭು ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು, ದ್ವಿಚಕ್ರ ವಾಹನಗಳನ್ನೇ ಟಾರ್ಗೆಟ್ ಮಾಡಿ ಬಳಿಕ ಅದರ ಹ್ಯಾಂಡಲ್ ಲಾಕ್ ಮುರಿದು ಎಸ್ಕೇಪ್ ಆಗುತ್ತಿದ್ದರು.

 

ಬಳಿಕ ಅದನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಬಂದ ಹಣದಲ್ಲಿ ಶೋಕಿ ಜೀವನ ಮಾಡುತ್ತಿದ್ದರು. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರಿನ ಅನ್ವಯ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಬಂಧಿತನಿಂದ 3 ಲಕ್ಷ ಬೆಲೆಬಾಳುವ 5 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಆರೋಪಿ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Author

Leave a Reply

Your email address will not be published. Required fields are marked *

You may have missed