ಕಡಿಮೆ ಬೆಲೆಯ ಬೆಸ್ಟ್ 5G ಸ್ಮಾರ್ಟ್ ಫೋನ್ ಬಂದಿವೆ: ಇಲ್ಲಿದೆ ನೋಡಿ!

0

ಭಾರತದಲ್ಲಿ 5ಜಿ ಸ್ಮಾರ್ಟ್ಫೋನ್ಗಳು ಬಿಡುಗಡೆ ಆಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದುಕೂಡ ಬಜೆಟ್ ಬೆಲೆಗೆ ಎಂಬುದು ವಿಶೇಷ. ಸೋಮವಾರವಷ್ಟೆ ಸ್ಯಾಮ್ಸಂಗ್ ಕಂಪನಿ ಕೇವಲ 13,490 ರೂ. ಗೆ ಗ್ಯಾಲಕ್ಸಿ M14 5G ಸ್ಮಾರ್ಟ್ಫೋನ್ ರಿಲೀಸ್ ಮಾಡಿದೆ.

ಜಿಯೋ, ಏರ್ಟೆಲ್ 5ಜಿ (Airtel 5G) ಸೇವೆ ದೇಶದೆಲ್ಲೆಡೆ ವಿಸ್ತರಣೆ ಆಗುತ್ತಿರುವ ಕಾರಣ ಪ್ರಸಿದ್ಧ ಸ್ಮಾರ್ಟ್ಫೋನ್ ಬ್ರ್ಯಾಂಡ್ಗಳು ಒಂದರ ಹಿಂದೆ ಒಂದರಂತೆ 5ಜಿ ಬೆಂಬಲ ನೀಡುವ ಮೊಬೈಲ್ (Mobile) ಅನ್ನು ರಿಲೀಸ್ ಮಾಡುತ್ತಿದೆ. ಕಳೆದ ವಾರ ಕೂಡ ದೇಶಿಯ ಮಾರುಕಟ್ಟೆಯಲ್ಲಿ ವಿವೋ ಸಂಸ್ಥೆ ಹೊಸ ವಿವೋ ಟಿ2 5ಜಿ (Vivo T2 5G) ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಇಂದಿನಿಣದ ಈ ಫೋನ್ ಖರೀದಿಗೆ ಸಿಗುತ್ತಿದೆ.

ಬೆಲೆ ಎಷ್ಟು?:

ವಿವೋ T2 5G ಸ್ಮಾರ್ಟ್ಫೋನ್ ಭಾರತದಲ್ಲಿ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ಇದರ 4GB RAM + 128GB ವೇರಿಯಂಟ್ಗೆ ಕೇವಲ 12,999 ರೂ. ಇದೆ. ಅಂತೆಯೆ 6GB RAM + 128GB ಸ್ಟೋರೇಜ್ ಮಾದರಿಗೆ 13,999 ರೂ. ನಿಗದಿ ಮಾಡಲಾಗಿದೆ. 8GB RAM + 128GB ಸ್ಟೋರೇಜ್ ಆಯ್ಕೆಗೆ 15,999 ರೂ. ಇದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಸೇರಿದಂತೆ ವಿವೋ ಅಧಿಕೃತ ವೆಬ್ಸೈಟ್ನಲ್ಲಿ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಆಫರ್ ಕೂಡ ಘೋಷಣೆ ಮಾಡಲಾಗಿದ್ದು ಹೆಚ್ಡಿಎಫ್ಸಿ, ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲೆ 1,500 ರೂ. ತ್ವರಿತ ರಿಯಾಯಿತಿ ಸಿಗಲಿದೆ.

About Author

Leave a Reply

Your email address will not be published. Required fields are marked *

You may have missed