ತಮಿಳು ನಾಡಿನಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ

0

ಸಾಕಷ್ಟು ವಿವಾದದ ಮೂಲಕವೇ ತೆರೆಗೆ ಬಂದ ಅದಾ ಶರ್ಮಾ ಮುಖ್ಯಭೂಮಿಕೆಯ ‘ದಿ ಕೇರಳ ಸ್ಟೋರಿ’ ಸಿನಿಮಾ ಶುಕ್ರವಾರ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಿಲೀಸ್ ಆದ ಎರಡೇ ದಿನಕ್ಕೆ 20 ಕೋಟಿ ಕಲೆಕ್ಷನ್ ಮಾಡಿರುವ ದಿ ಕೇರಳ ಸ್ಟೋರಿ ಸಿನಿಮಾಗೆ ತಮಿಳು ನಾಡಿನಲ್ಲಿ ನಿಷೇಧ ಹೇರಲಾಗಿದೆ.

 

ದಿ ಕೇರಳ ಸ್ಟೋರಿ ಸಿನಿಮಾವನ್ನು ತಮಿಳು ನಾಡಿನಲ್ಲಿ ಪ್ರದರ್ಶನ ಮಾಡದಂತೆ ಅಲ್ಲಿನ ಚಿತ್ರಮಂದಿರದ ಮಾಲೀಕರು ನಿರ್ಧಾರ ಕೈಗೊಂಡಿದ್ದಾರೆ. ಸಿನಿಮಾದ ಕುರಿತಂತೆ ಪ್ರತಿಭಟನೆ ಕಾವು ಹೆಚ್ಚಾಗಿದ್ದರಿಂದ ಇಂಥದ್ದೊಂದು ತೀರ್ಮಾನ ತಗೆದುಕೊಳ್ಳಲಾಗಿದೆ ಎಂದಿದ್ದಾರೆ ಚಿತ್ರ ಪ್ರದರ್ಶಕರು ಹೇಳಿದ್ದಾರೆ.

ಸಿನಿಮಾಗೆ ಮೊದಲ ದಿನ ಹೇಳಿಕೊಳ್ಳುವಂತಹ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಮೊದಲ ದಿನ ಚಿತ್ರಕ್ಕೆ ಬಾಕ್ಸ್ ಆಫೀಸಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಈ ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಂತೆಯೇ ಚಿತ್ರಕ್ಕೆ ಜೀವ ಬಂದಂತಾಗಿದೆ, ಹಲವರು ಚಿತ್ರದ ಬಗ್ಗೆ ಮೆಚ್ಚಿ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ.

ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲೂ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದು ಇದೀಗ ಮತ್ತಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನವಾಗುವ ಸಾಧ್ಯತೆ ಇದೆ.

About Author

Leave a Reply

Your email address will not be published. Required fields are marked *

You may have missed