ಸೆಲೆಬ್ರಿಟಿಗಳನ್ನು ಮದುವೆಗೆ ಆಹ್ವಾನಿಸಿದ ‘ಸಿಂಹಪ್ರಿಯ’ ಜೋಡಿ

0

ಗುಟ್ಟಾಗಿ ಪ್ರೀತಿಸುತ್ತಿದ್ದ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇತ್ತೀಚೆಗಷ್ಟೇ ತಮ್ಮ ಪ್ರೀತಿಯ ವಿಷಯವನ್ನು ರಿವೀಲ್ ಮಾಡಿದ್ದರು. ಈ ಹಿಂದೆ ಮನೆಯಲ್ಲೇ ಸಿಂಪಲ್ ಆಗಿ ಎಂಗೇಜ್ ಮೆಂಟ್ ಮಾಡಿಕೊಂಡಿದ್ದ ಸಿಂಹಪ್ರಿಯಾ ಜೋಡಿ ಇದೀಗ ಹಸೆಮಣೆ ಏರಲು ಸಜ್ಜಾಗಿದೆ, ಈ ಹಿನ್ನೆಲೆಯಲ್ಲಿ ಸೆಲೆಬ್ರಿಟಿಗಳಿಗೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

 

ಸದ್ಯ ನಟ ಕಿಚ್ಚ ಸುದೀಪ್, ಕ್ರೇಜಿ ಸ್ಟಾರ್ ರವಿಚಂದ್ರನ್, ನಟಿ ಶೃತಿ, ಮಾಲಾಶ್ರೀ ಹಾಗೂ ಸಂಗೀತ ನಿರ್ದೇಶಕ ಗುರು ಕಿರಣ್ ಮನೆಗಳಿಗೆ ಭೇಟಿ ನೀಡಿರುವ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ವಿವಾಹದ ಆಮಂತ್ರಣ ಪತ್ರಿಕೆ ನೀಡಿ ಕಲಾವಿದರನ್ನು ಆಹ್ವಾನಿಸುತ್ತಿರುವ ಫೋಟೊಗಳು ಸಾಮಾಜಿಕ‌ ಜಾಲತಾಣದಲ್ಲಿ ಹರಿದಾಡಿವೆ.

ನವರಿ 26ರಂದು ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಈ ಜೋಡಿ ಜನವರಿ 28ರಂದು ಬೆಂಗಳೂರಿನಲ್ಲಿ ರಿಸೆಪ್ಷನ್ ಮಾಡಿಕೊಳ್ಳಲಿದೆ. ಇನ್ನು ಮೊನ್ನೆಯಷ್ಟೇ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಡಾಲಿ ಧನಂಜಯ್ ಮನೆಗೆ ಭೇಟಿ ನೀಡಿ ವಿವಾಹ ಆಮಂತ್ರಣ ನೀಡಿತ್ತು. ಈ ವೇಳೆಯ ಫೋಟೊವನ್ನು ಹಂಚಿಕೊಂಡಿದ್ದ ಡಾಲಿ ಧನಂಜಯ್ ಇಷ್ಟು ದಿನಗಳು ಮನೆಗೆ ಒಬ್ಬನೇ ಬರ್ತಿದ್ದ, ಈಗ ಜೋಡಿಯಾಗಿ ಬಂದಿದ್ದಾನೆ, ಮುದ್ದಾದ ಜೋಡಿ ಎಂದು ಬರೆದುಕೊಂಡು ಇಬ್ಬರಿಗೂ ಶುಭ ಹಾರೈಸಿದ್ದರು.

About Author

Leave a Reply

Your email address will not be published. Required fields are marked *

You may have missed