ಮೇ 10 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ

0

ಬೆಂಗಳೂರು: ಕರ್ನಾಟಕ 2023 ರ ವಿಧಾನಸಭಾ ಚುನಾವಣೆ(Karnataka Election) ಪ್ರಯುಕ್ತ ಮೇ 10 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ (State Govt) ಆದೇಶ ಹೊರಡಿಸಿದೆ. ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ.

ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಅಂದರೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಸರ್ಕಾರವು ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲು ದಿನಾಂಕದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಈ ಕ್ಷೇತ್ರಗಳಲ್ಲಿ ಮತದಾನವು ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ಧಲ್ಲಿ ಅಂತಹ ಕಚೇರಿ ಹಾಗೂ ಶಾಲೆಗಳಿಗೆ ದಿನಾಂಕ 09-05-2023ರ ಮಂಗಳವಾರದಂದು ಹಾಗೂ ಮತಏಣಿಕೆ ನಡೆಯುವ ದಿನಾಂಕ 13-05-2023ರಂದು ಮತ ಏಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧ ಪಟ್ಟ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed