ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಮಾನ ಇಲಾಖೆ

0

ಬೆಂಗಳೂರು ;- ಕರಾವಳಿ ಭಾಗದಲ್ಲಿ ನಾಲ್ಕು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಮಹಾರಾಷ್ಟ್ರದಿಂದ ಕೇರಳ ಕರಾವಳಿ ತೀರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ, ಹೀಗಾಗಿ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೆಲವು ಕಡೆ ಭಾರಿ ಮಳೆ ಕಾರಣ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಅಲ್ಲಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮೀನುಗಾರರು ಇವತ್ತು ಒಂದು ದಿನ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

About Author

Leave a Reply

Your email address will not be published. Required fields are marked *

You may have missed