ಕೇವಲ ಒಂದು ಕುಟುಂಬದ ಅಖಾಡದಿಂದ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ: ಬ್ರಿಜ್ ಭೂಷಣ್

0

ಗೊಂಡಾ: ಏಳು ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌(Brij Bhushan) ತಾವು ಯಾವುದೇ ತನಿಖೆಗೂ ಸಿದ್ಧ ಎಂದಿದ್ದಾರೆ. ಇಲ್ಲಿಗೆ 40 ಕಿ.ಮೀ. ದೂರದಲ್ಲಿರುವ ಬಿಷ್ಣೋಹರ್‌ಪುರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

‘ರಾಜೀನಾಮೆ ನೀಡುವುದು ದೊಡ್ಡ ವಿಷಯವೇ ಇಲ್ಲ. ಆದರೆ ನಾನು ರಾಜೀನಾಮೆ ನೀಡುವುದಿಲ್ಲ. ಹಾಗೆ ಮಾಡಿದರೆ ತಪ್ಪು ಒಪ್ಪುಕೊಂಡಂತಾಗುತ್ತದೆ. ನಾನು ಮುಗ್ಧ, ಸುಪ್ರೀಂ ಕೋರ್ಚ್‌ ಹಾಗೂ ದೆಹಲಿ ಪೊಲೀಸರ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ನಾನು ಯಾವುದೇ ತನಿಖೆಗೂ ಸಿದ್ಧ. ಡಬ್ಲ್ಯುಎಫ್‌ಐ ಅಧ್ಯಕ್ಷನಾಗಿ ನನ್ನ ಅವಧಿ ಮುಗಿದಿದೆ. 45 ದಿನಗಳಲ್ಲಿ ಹೊಸದಾಗಿ ಚುನಾವಣೆ ನಡೆಯಲಿದೆ’ ಎಂದರು.

ಕಾಂಗ್ರೆಸ್‌ ವಿರುದ್ಧಕಿಡಿ: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಪ್ರಿಯಾಂಕ ಗಾಂಧಿ ಭೇಟಿ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಬ್ರಿಜ್‌ ಭೂಷಣ್‌, ‘ಈ ವಿವಾದದ ಹಿಂದೆ ಯಾರಿದ್ದಾರೆ ಎನ್ನುವುದು ಇಂದು ಸ್ಪಷ್ಟವಾಗಿದೆ. ನಾನು ಆರಂಭದಿಂದಲೇ ಈ ಬಗ್ಗೆ ಹೇಳುತ್ತಿದ್ದೇನೆ. ಉದ್ಯಮಿ ಹಾಗೂ ಕಾಂಗ್ರೆಸ್‌ನ ಕೈವಾಡವಿದೆ ಎಂದು. ನನ್ನ ಮೇಲೆ ಅವರಿಗೆ ಸಿಟ್ಟಿದೆ’ ಎಂದರು. ಆದರೆ ಬಿಜೆಪಿ ಸಂಸದರೂ ಆಗಿರುವ ಭೂಷಣ್‌ ಈ ಬಗ್ಗೆ ಹೆಚ್ಚಿನ ವಿವರ ಬಹಿರಂಗಪಡಿಸಲಿಲ್ಲ.

About Author

Leave a Reply

Your email address will not be published. Required fields are marked *

You may have missed