ಇಂದು ವಿಶ್ವ ರಕ್ತದಾನಿಗಳ ದಿನ

0

ದಾನಗಳಲ್ಲೇ ಅತ್ಯಂತ ಶ್ರೇಷ್ಠವಾದ ದಾನ ರಕ್ತದಾನ. ಹೀಗಾಗಿ ರಕ್ತದಾನ ಮಾಡಿ ಮತ್ತೊಬ್ಬರ ಜೀವವನ್ನು ಉಳಿಸಬೇಕು. ಇಂತಹ ಮಹತ್ವದ ಕಾರ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಹೀಗಾಗಿ ಜೂ. 14 ಪ್ರತೀ ವರ್ಷ ವಿಶ್ವ ರಕ್ತ ದಾನಿಗಳ ದಿನ ಆಚರಿಸಲಾಗುತ್ತಿದೆ. ಈ ವರ್ಷ ಸರ್ಕಾರ, ರಕ್ತನಿಧಿಗಳು ಹಾಗೂ ಸಂಘ-ಸಂಸ್ಥೆಗಳು ರಕ್ತದಾನ ಮಾಡುವುದು ಒಗ್ಗಟ್ಟಿನ ಪ್ರಕ್ರಿಯೆ, ಈ ಪ್ರಯತ್ನಕ್ಕೆ ಕೈ ಜೋಡಿಸಿ ಜೀವ ಉಳಿಸೋಣ’ ಎಂಬ ಘೋಷವಾಕ್ಯದೊಂದಿಗೆ ರಕ್ತದಾನ ಶಿಬಿರಗಳನ್ನು ಆಯೋಜಿಸಿವೆ.

ಜತೆಗೆ ರಕ್ತದಾನಿಗಳನ್ನು ಪ್ರೋತ್ಸಾಹಿಸಲು ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವವರನ್ನು ಗುರುತಿಸಿ ಗೌರವಿಸುವ ಕಾರ್ಯವೂ ನಡೆಯುತ್ತಿದೆ.

ಯಾರು ರಕ್ತದಾನ ಮಾಡಬಹುದು?: 18 ರಿಂದ 65 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ, ಕನಿಷ್ಠ 45 ಕೆ.ಜಿ. ದೇಹದ ತೂಕ ಇರುವವರು 350 ಎಂಎಲ್ ಹಾಗೂ 55 ಕೆ.ಜಿ.ಗಿಂತ ಅಧಿಕ ತೂಕ ಇರುವವರು 450 ಎಂಎಲ್ ರಕ್ತದಾನ ಮಾಡಬಹುದಾಗಿದೆ. ದಾನಿಗಳ ಹಿಮೋಗ್ಲೋಬಿನ್ (ಎಚ್​ಬಿ) ಪ್ರಮಾಣ ಕನಿಷ್ಠ 12.5 ಇರಬೇಕು. ಒಂದು ಯೂನಿಟ್ ರಕ್ತದಿಂದ ನಾಲ್ಕು ಜೀವಗಳನ್ನು ಉಳಿಸಬಹುದಾಗಿದೆ.

ಯಾರು ರಕ್ತದಾನ ಮಾಡಬಾರದು: ಅನಾರೋಗ್ಯ ಹೊಂದಿರುವವರು, ನಿಯಮಿತ ಹಾಗೂ ನಿರಂತರ ಔಷಧ ಸೇವಿಸುವವರು, ಎಚ್​ಐವಿ/ಏಡ್ಸ್, ಕ್ಯಾನ್ಸರ್ ರೋಗಿಗಳು, ಹೃದ್ರೋಗಿಗಳು, ಲಿವರ್ ಮತ್ತು ಕಿಡ್ನಿ ಸಮಸ್ಯೆ ಹೊಂದಿರುವವರು, ಗರ್ಭಿಣಿಯರು, ಹೆಪಟೈಟಿಸ್ ಬಿ ಸೋಂಕಿತರು, ಸಾಂಕ್ರಾಮಿಕ ರೋಗಿಗಳು, ಮಾದಕ ವ್ಯಸನಿಗಳು, ಕಡಿಮೆ ತೂಕ ಹೊಂದಿರುವವರು ಹಾಗೂ ಹಿಮೋಗ್ಲೋಬಿನ್ ಕೊರತೆ ಇರುವವರು ರಕ್ತದಾನ ಮಾಡುವಂತಿಲ್ಲ.

About Author

Leave a Reply

Your email address will not be published. Required fields are marked *

You may have missed