ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ..!

0

ಬೆಂಗಳೂರು: ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ (Shakti Yojana) ಚಾಲನೆ ದೊರೆಯಲಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದ (Vidhana Soudha) ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಚಾಲನೆ ನೀಡಲಾಗುತ್ತದೆ.

ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಯೋಜನೆಗೆ ಚಾಲನೆ ನೀಡಲಿದ್ದಾರೆ.

ವಿಧಾನಸೌಧದ ಮುಂಭಾಗ 4 ನಿಗಮದ (BMTC, KSRTC, NWKRTC, KKRTC) ಸಾಮಾನ್ಯ ಬಸ್ ನಿಲ್ಲಿಸಲು ಫ್ಲಾನ್ ಮಾಡಲಾಗಿದೆ. ನಾಡಗೀತೆ ಹಾಡುವ ಮೂಲಕ ಚಾಲನೆಗೊಳ್ಳುವ ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಲೋಗೋ ಅನಾವರಣಗೊಳಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜತೆಗಿರುವರು. ನಂತರ ಸಿದ್ದರಾಮಯ್ಯ ಅವರು ಬಸ್​ನಲ್ಲೇ ಸಿಟಿ ರೌಂಡ್ಸ್ ಹಾಕಲಿದ್ದಾರೆ. ವಿಧಾನ ಸೌಧ ಒಂದು ರೌಂಡ್, ಮೆಜೆಸ್ಟಿಕ್ ಅಥವಾ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬಿಎಂಟಿಸಿಯಲ್ಲಿ ಒಂದು ರೌಂಡ್ ಹೋಗಲಿದ್ದಾರೆ.

ಇನ್ನು ಈ ಕಾರ್ಯಕ್ರಮಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೂ ಆಹ್ವಾನ ನೀಡಲಾಗಿದೆ. ಆದರೆ ಕಾರ್ಯಕ್ರಮಕ್ಕೆ ಆಗಮಿಸುವುದು ಬಹುತೇಕ ಅನುಮಾನವಾಗಿದೆ. ಮಧ್ಯಾಹ್ನ 1 ಗಂಟೆಯ ನಂತ್ರ ಬಿಎಂಟಿಸಿ, ಕೆಎಸ್‌ಆರ್ಟಿಸಿ, ಎನ್ ಡಬ್ಲ್ಯೂಆರ್ಟಿಸಿ, ಕೆಕೆಆರ್ಟಿಸಿ ಬಸ್​ಗಳಲ್ಲಿ‌ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ತಮಿಳುನಾಡು, ದೆಹಲಿ ಸೇರಿ ವಿವಿಧ ರಾಜ್ಯಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ನೀಡುವ ಯೋಜನೆ ಜಾರಿಯಲ್ಲಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಜಾರಿಗೆ ಬರುತ್ತಿದೆ.

ಪ್ರಯಾಣಿಕರಗಮನಕ್ಕೆ

  1. ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎಸಿ ಸ್ಲಿಪರ್‌, ಎಸಿ ಸ್ಲಿಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ, ಅಂಬಾರಿ ಡೀಮ್ ಕ್ಲಾಸ್, ಅಂಬಾರಿ ಉತ್ಸವ್, ಫೈ ಬಸ್, ಇವಿ ಪ್ಲಸ್ ಸಾರಿಗೆಗಳಲ್ಲಿ ಉಚಿತ ಪ್ರಯಾಣ ಅನ್ವಯಿಸುವುದಿಲ್ಲ.
  2. ಮಹಿಳಾ ಪ್ರಯಾಣಿಕರಿಗೆ ಪ್ರಯಾಣದ ದೂರದ ಯಾವುದೇ ಮಿತಿ ಇರುವುದಿಲ್ಲ. ಈ ಪ್ರಯಾಣ ಸೌಲಭ್ಯ ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಅನ್ವಯಿಸುತ್ತದೆ.
  3. ಆಯ್ದ ಅಂತಾರಾಜ್ಯ ಸಾರಿಗೆಗಳಲ್ಲಷ್ಟೇ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ.
  4. ಶಕ್ತಿ ಯೋಜನೆಯು ದೈನಿಕ ಪಾಸ್, ಮಾಸಿಕ ಪಾಸ್, ಸಾಂದರ್ಭಿಕ ಒಪ್ಪಂದ ಹಾಗೂ ಕಾಯಂ ಗುತ್ತಿಗೆ ಪ್ಯಾಕೇಜ್ ಸೇವೆಗಳಿಗೆ ಅನ್ವಯಿಸುವುದಿಲ್ಲ.
  5. ರಾಜ್ಯದೊಳಗೆ ವೇಗದೂತ ಸಾರಿಗೆಗಳಲ್ಲಿ ಮುಂಗಡ ಆಸನ ಕಾಯ್ದಿರಿಸಲು ನಿಗಮದ ಬುಕಿಂಗ್ ಕೌಂಟರ್‌ಗಳಲ್ಲಿ ವ್ಯವಸ್ಥೆ ಇರಲಿದೆ. ಶೇ.50ರ ಆಸನಗಳನ್ನು ಮೀರದಂತೆ ನಿಗದಿತ ಕನಿಷ್ಠ ಸೇವಾ ಶುಲ್ಕ ಪಡೆದು ಬುಕಿಂಗ್ ಮಾಡಿಕೊಳ್ಳಲಾಗುತ್ತದೆ.
  6. ಮುಂಗಡ ಆಸನ ಕಾಯ್ದಿರಿಸಲು ಬುಕಿಂಗ್ ಕೌಂಟರ್‌ಗೆ ಆಗಮಿಸಿದಾಗ ಗುರುತಿನ ಚೀಟಿ ತೋರಿಸಿದರೆ ಸಾಕು. ಸ್ಮಾರ್ಟ್ ಕಾರ್ಡ್ ವಿತರಿಸಿದ ನಂತರ ಅದನ್ನು ತೋರಿಸಬೇಕು.
  7. ಪ್ರಯಾಣ ಸಮಯದಲ್ಲಿ ಗುರುತಿನ ಚೀಟಿ (ವಿತರಣೆ ಬಳಿಕ ಸ್ಮಾರ್ಟ್ ಕಾರ್ಡ್) ಮತ್ತು ಕಾಯ್ದಿರಿಸಿದ ಟಿಕೆಟ್ ತೋರಿಸಬೇಕಾಗುತ್ತದೆ.

About Author

Leave a Reply

Your email address will not be published. Required fields are marked *

You may have missed