ಮೈಸೂರಿಗೆ ಆಗಮಿಸಿದ ಟಾಲಿವುಡ್ ನಟ ಉಸ್ತಾದ್ ರಾಮ್ ಪೋತಿನೇನಿ

0

ಟಾಲಿವುಡ್ ಖ್ಯಾತ ನಟ ಉಸ್ತಾದ್ ರಾಮ್ ಪೋತಿನೇನಿ ಮೈಸೂರಿಗೆ ಆಗಮಿಸಿದ್ದಾರೆ. ಉಸ್ತಾದ್ ನಟನೆಯ ‘ಬೊಯಾಪತಿ ರಾಪೊ’ ಸಿನಿಮಾದ ಶೂಟಿಂಗ್ ಇಂದಿನಿಂದ 15ನೇ ತಾರೀಖಿನವರೆಗೆ ಮೈಸೂರಿನಲ್ಲಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದಾರೆ.

ಈ ಸಿನಿಮಾದಲ್ಲಿ ಉಸ್ತಾದ್ ಗೆ ಜೋಡಿಯಾಗಿ ನಟಿ ಶ್ರೀಲೀಲಾ ಬಣ್ಣ ಹಚ್ಚುತ್ತಿದ್ದಾರೆ.

ಈ ಹಿಂದೆ ಉಸ್ತಾದ್ ರಾಮ್ ಪೋತಿನೇನಿ ಹುಟ್ಟುಹಬ್ಬದಂದು ಈ ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್ ಆಗಿತ್ತು. ಕೈಯಲ್ಲಿ ಕತ್ತಿ ಹಿಡಿದು, ಎಮ್ಮೆಯೊಟ್ಟಿಗೆ ಮಾಸ್ ಡೈಲಾಗ್ ಹೊಡೆಯುತ್ತಾ ರಗಡ್ ಲುಕ್ ನಲ್ಲಿ ರಾಮ್ ಪೋತಿನೇನಿ ಎಂಟ್ರಿ ಕೊಟ್ಟ ಗ್ಲಿಂಪ್ಸ್ ಸಖತ್ ಸದ್ದು ಮಾಡಿತ್ತು.

ಮಾಸ್ ಪ್ರಿಯರಿಗೆ ಹೇಳಿಮಾಡಿಸಿದಂತಿರುವ ಈ ಸಿನಿಮಾಗೆ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳ ಸಾರಥಿ ಬೋಯಾಪಾಟಿ ಸೀನು ಆಕ್ಷನ್ ಕಟ್ ಹೇಳಿದ್ದಾರೆ. ಲವರ್ ಬಾಯ್ ಆಗಿ ಮಿಂಚುತ್ತಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ದರ್ಶನ ಕೊಟ್ಟಿದ್ದಾರೆ. ಕನ್ನಡತಿ ಶ್ರೀಲೀಲಾ ರಾಮ್ ಗೆ ಜೋಡಿಯಾಗಿ ನಟಿಸಿದ್ದಾರೆ.

ಬೋಯಾಪಾಟಿ ಶೀನು ಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ನಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ. ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ.

About Author

Leave a Reply

Your email address will not be published. Required fields are marked *

You may have missed