ಅತಿ ಹೆಚ್ಚು ರೈತರ ಆತ್ಮಹತ್ಯೆಯಾಗಿರುವುದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ: ಬಸವರಾಜ ಬೊಮ್ಮಾಯಿ

0

ಬೆಂಗಳೂರು: ಮುಂಗಾರು ಮಳೆ ವೈಫಲ್ಯವಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟ ವಿರೋಧ ಪಕ್ಷಗಳ ಸಭೆ ನಡೆಸುವುದರಲ್ಲಿ ಎಲ್ಲ ಸಮಯ ತೊಡಗಿಸಿದ್ದಾರೆ. ಅವರಿಗೆ ರೈತರ ಜೀವಕ್ಕಿಂತ ರಾಜಕೀಯವೇ ಮುಖ್ಯವಾಗಿದೆ. ಇದೊಂದು ರೈತ ವಿರೋಧಿ ಸರ್ಕಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಮುಂಗಾರು ವಿಫಲವಾಗಿ ರೈತರು ಬಿತ್ತಿರುವ ಬೆಳೆ ಮೊಳಕೆಯೊಡೆಯದೇ ವಿಫಲವಾಗಿದೆ. ಹಲವಾರು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ವರದಿಗಳು ಬರುತ್ತಿವೆ.
ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ಹಾಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಹಿಂದೆ 2013-18._ರಲ್ಲಿ ಅತಿ ಹೆಚ್ಚು ರೈತರ ಆತ್ಮಹತ್ಯೆಯಾಗಿರುವುದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಅದು ಮರುಕಳಿಸುವಂತೆ ಕಾಣಿಸುತ್ತಿದೆ. ನಾನು ಇದನ್ನು ಖಂಡಸುಸತ್ತೇನೆ ಸರ್ಕಾರ ಕೂಡಲೇ ಎಲ್ಲ ಕ್ರಮ ಕೈಗೊಳ್ಳಲು ನಾನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed