ತೈವಾನ್‌ ಸಮುದ್ರ ತೀರದಲ್ಲಿ ರಷ್ಯಾದ ಎರಡು ಯುದ್ಧನೌಕೆಗಳು ಪತ್ತೆ

0

ತೈಪೆ: ದೇಶದ ಪೂರ್ವ ಕರಾವಳಿ ವ್ಯಾಪ್ತಿಯಲ್ಲಿ ರಷ್ಯಾದ ಎರಡು ಯುದ್ಧ ನೌಕೆಗಳು ಇರುವುದನ್ನು ಪತ್ತೆಯಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲು ಲಘು ವಿಮಾನಗಳು ಹಾಗೂ ಕಣ್ಗಾವಲು ನೌಕೆಗಳನ್ನು ನಿಯೋಜಿಸಲಾಗಿದೆ ಎಂದು ತೈವಾನ್‌ನ ರಕ್ಷಣಾ ಸಚಿವಾಲಯ ತಿಳಿಸಿದೆ.

ರಾತ್ರಿ 11ರ ವೇಳೆಗೆ ನಮ್ಮ ಪೂರ್ವ ತೀರದಲ್ಲಿ ದಕ್ಷಿಣದಿಂದ ಉತ್ತರಕ್ಕೆ ಸಂಚರಿಸುತ್ತಿದ್ದಾಗ ರಷ್ಯಾ ನೌಕೆಗಳನ್ನು ಪತ್ತೆ ಮಾಡಲಾಗಿದೆ ಎಂದು ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಆದರೆ ಈ ಎರಡು ಯುದ್ಧ ನೌಕೆಗಳು ತೈವಾನ್‌ ತೀರದಿಂದ ಎಷ್ಟು ದೂರದಲ್ಲಿವೆ ಎಂಬುದನ್ನು ಖಚಿತಪಡಿಸಿಲ್ಲ.

ಚೀನಾ ನೌಕೆಗಳು ತನ್ನ ಸಮುದ್ರ ಪ್ರದೇಶದಲ್ಲಿ ನಿತ್ಯ ಕಾಣಿಸಿಕೊಳ್ಳುತ್ತಿವೆ ಎಂದು ದ್ವೀಪ ರಾಷ್ಟ್ರವಾಗಿರುವ ತೈವಾನ್‌ನಲ್ಲಿ ವರದಿಯಾಗುತ್ತಿರುತ್ತದೆ. ಆದರೆ, ಈ ದ್ವೀಪವು (ತೈವಾನ್‌) ತನ್ನದೇ ಭೂ ಪ್ರದೇಶ ಎಂದು ಹೇಳಿಕೊಂಡಿರುವ ಚೀನಾ, ಅಗತ್ಯಬಿದ್ದರೆ ಮುಂದೊಂದು ದಿನ ಬಲವಂತವಾಗಿ ವಶಪಡಿಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದೆ.

About Author

Leave a Reply

Your email address will not be published. Required fields are marked *

You may have missed