ನಾಳೆ ಎಂಜಿ ರೋಡ್ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

0

ಬೆಂಗಳೂರು ಮೆಟ್ರೋ ರೈಲು ನಿಗಮವು ಜುಲೈ 2 ಅಂದ್ರೆ ಭಾನುವಾರ ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಬೆಳಗ್ಗೆ 07.00 ಗಂಟೆಯಿಂದ 9.00 ಗಂಟೆಯ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.

ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ, ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07.00 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ.

ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.

About Author

Leave a Reply

Your email address will not be published. Required fields are marked *

You may have missed