ಅದ್ದೂರಿಯಾಗಿ ನಿಶ್ಷಿತಾರ್ಥ ಮಾಡಿಕೊಂಡ ವರುಣ್ ತೇಜ್, ಲಾವಣ್ಯ ತ್ರಿಪಾಠಿ

0

ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಯಂಗ್ ಕಪಲ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ನಿಶ್ಷಿತಾರ್ಥ ಮಾಡಿಕೊಂಡಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೂ ಈ ಜೋಡಿ ಬ್ರೇಕ್ ಹಾಕಿದ್ದಾರೆ. ಸದ್ಯ ಯಂಗ್ ಜೋಡಿಯ ಎಂಗೇಜ್‌ಮೆಂಟ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

 

2017ರಲ್ಲಿ ಇಬ್ಬರು ‘ಮಿಸ್ಟರ್’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ವರಣ್ ಹಾಗೂ ಲಾವಣ್ಯ ಬಳಿಕ ಕ್ಲೋಸ್ ಆಗಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು. ಇಬ್ಬರೂ ಡೇಟಿಂಗ್ ಮಾಡುತ್ತಿದ್ದರೂ, ಅದು ಪಬ್ಲಿಕ್ ಆಗದಂತೆ ನೋಡಿಕೊಂಡಿದ್ದಾರೆ. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ‘ಅಂತರಿಕ್ಷಂʼ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು.ಅಲ್ಲಿಂದ ಎಂಗೇಜ್‌ಮೆಂಟ್ ಆಗುವವರೆಗೂ ರೂಮರ್ ಕಪಲ್ ಆಗಿದ್ದರು.

ಆಗಾಗ ವರುಣ್, ಲಾವಣ್ಯ ಇಬ್ಬರೂ ಕಾರ್ಯಕ್ರಮಗಳು ಹಾಗೂ ಪಾರ್ಟಿಗಳಲ್ಲಿ ಭೇಟಿಯಾಗುತ್ತಿದ್ದರು. ಡಿಸೆಂಬರ್ 15 ಲಾವಣ್ಯ ಹುಟ್ಟುಹಬ್ಬದಂದು ಮದುವೆಗೆ ಪ್ರಪೋಸ್ ಮಾಡಿದ್ದರು. ಎರಡೂ ಮನೆಯವರು ಗ್ರೀನ್ ಸಿಗ್ನಲ್ ನೀಡಿದ್ದರು.

ಯಂಗ್ ಜೋಡಿ ವರುಣ್- ಲಾವಣ್ಯ ಅವರು ಹೈದರಾಬಾದ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿ ಎಂಗೇಜ್ ಆಗಿದ್ದಾರೆ. ಜೂನ್ ೯ರ ರಾತ್ರಿ ಎರಡು ಕುಟುಂಬದವರು ಆಪ್ತರಷ್ಟೇ ಭಾಗಿಯಾಗಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್ ಅವರ ಇಡೀ ಕುಟುಂಬ, ಅಲ್ಲು ಅರ್ಜುನ್ ಫ್ಯಾಮಿಲಿ, ವೆಂಕಟೇಶ್ವರ ರಾವ್ ಕುಟುಂಬದವರಷ್ಟೇ ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಸದ್ಯ ಎಂಗೇಜ್ ಆಗಿರುವ ಈ ಜೋಡಿ ಈ ವರ್ಷದ ಅಂತ್ಯದಲ್ಲಿ ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

About Author

Leave a Reply

Your email address will not be published. Required fields are marked *

You may have missed