ರಂಗಭೂಮಿ ಹಿರಿಯ ಕಲಾವಿದ ಬೆಳಗಲ್ಲು ವೀರಣ್ಣ ನಿಧನ: ಸಿಎಂ ಬೊಮ್ಮಾಯಿ ಸಂತಾಪ

0

ಬೆಂಗಳೂರು: ರಂಗ ಕಲಾವಿದರಾದ ಮತ್ತು ಜಾನಪದ ಕಲೆಗೆ ಹೊಸ ಸ್ಪರ್ಶ ನೀಡಿದ್ದ ಬೆಳಗಲ್ಲು ವೀರಣ್ಣ ಅವರು ಭಾನುವಾರ ನಿಧನರಾದರು. ಕಲಾವಿದ ಬೆಳಗಲ್ಲು ವೀರಣ್ಣನವರ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ರಂಗ ಕಲಾವಿದರು, ಗೊಂಬ ಕಲಾತಂಡದ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಮಾದನಾಯಕನಹಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ,

ತೊಗಲು ಗೊಂಬೆಯಾಟ ಎಂಬ ಜಾನಪದ ಕಲೆಗೆ ಹೊಸ ಸ್ಪರ್ಶ ನೀಡಿ, ಹೊಸ ವೈಭವವನ್ನು ಸೃಷ್ಟಿಸಿದ ಖ್ಯಾತ ರಂಗಭೂಮಿ ಮತ್ತು ಜಾನಪದ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣನವರು ರಸ್ತೆ ಅಪಘಾತಕ್ಕೀಡಾಗಿ ಇಹಲೋಕ ತ್ಯಜಿಸಿದರು ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ. ನಿಧನದ ದುಃಖ ತಡೆದುಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed