ಕ್ಷೇತ್ರದ ಹೊರಗಿದ್ದುಕೊಂಡೇ ಗೆದ್ದು ಬೀಗಿದ ವಿನಯ್ ಕುಲಕರ್ಣಿ

0

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರಂದು ಮತದಾನ ನಡೆದಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಭಾಕಿ ಇದೆ.

ಕಾಂಗ್ರೆಸ್​ ಮ್ಯಾಜಿಕ್ ನಂಬರ್ ದಾಟಿ ಸರಳ ಬಹುಮತ ಪಡೆದಿದ್ದು, ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್​ 127 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 67 ಕ್ಷೇತ್ರಗಳಲ್ಲಿ ಮುಂದಿದೆ. ಇನ್ನು ಜೆಡಿಎಸ್​ 22 ಸ್ಥಾನ ಹಾಗೂ ಇತರರು 7 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ.

ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು 5,30,85,566 ಮತದಾರರ ಪೈಕಿ 3,88,51,807 ಜನರಿಂದ ಮತದಾನ. 26682156 ಪುರುಷರ ಪೈಕಿ 19658398 ಪುರುಷರು ಹಕ್ಕು ಚಲಾವಣೆ ಮಾಡಿದ್ದಾರೆ. 26398483 ಮಹಿಳಾ ಮತದಾರರ ಪೈಕಿ 19192372 ಮಹಿಳೆಯರಿಂದ ಮತದಾನವಾಗಿದ್ದು, 4927 ಮಂಗಳಮುಖಿಯರ ಪೈಕಿ 1037 ಮಂಗಳಮುಖಿಯರಿಂದ ಮತ ಚಲಾಯಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಶೇ. 73.19ರಷ್ಟು ಮತಚಲಾವಣೆಯಾಗಿದೆ.

About Author

Leave a Reply

Your email address will not be published. Required fields are marked *

You may have missed