ಮುರುಘಾ ಶ್ರೀ ವಿರುದ್ಧ 12 ಮತ್ತು 14 ವರ್ಷದ ಬಾಲಕಿಯರು ಹೇಳಿದ್ದೇನು?

0

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ (Murugha Mutt Shivamurthy Sharanara) ವಿರುದ್ಧ ದಾಖಲಾದ 2ನೇ ಫೋಕ್ಸೋ ಪ್ರಕರಣ (POCSO Case) ಸಂಬಂಧ ಮಠದ ಹಾಸ್ಟೆಲ್‌ನಲ್ಲಿದ್ದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ದೃಢಪಟ್ಟಿದ್ದು, ಪೊಲೀಸರು 761 ಪುಟಗಳ ಚಾರ್ಜ್ ಶೀಟ್ (Charge Sheet) ಸಲ್ಲಿಸಿದ್ದಾರೆ.

ಎ ಮತ್ತು ಬಿ ಎರಡು ಭಾಗವಾಗಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಾತ್ರವಲ್ಲದೆ, 12 ಮತ್ತು 14 ವರ್ಷದ ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ಸಿಆರ್ಪಿಸಿ 161 ಅಡಿ ದಾಖಲಿಸಿಕೊಳ್ಳಲಾಗಿದೆ. ಟಿವಿ ನೋಡುತ್ತ ರೂಮಿನಲ್ಲಿ ಕುಳಿತಾಗ ಮುರುಘಾಶ್ರೀ ರೇಪ್ ಮಾಡಿದರು ಎಂದು 12 ವರ್ಷದ ಬಾಲಕಿ ಹೇಳಿಕೆ ನೀಡಿದ್ದು, ಸ್ವಾಮೀಜಿ ನೀಡಿದ ಚಾಕ್ಲೇಟ್ ತಿಂದ ಬಳಿಕ ನಿದ್ದೆ ಬಂದು ಮಲಗಿದ್ದೆ, ಎಚ್ಚರವಾದಾಗ ಸುಸ್ತು, ಕಾಲು ತೊಡೆ ಭಾಗ ನೋವಿತ್ತು ಎಂದು 14 ವರ್ಷದ ಬಾಲಕಿ ಹೇಳಿಕೆಯಲ್ಲಿ ತಿಳಿಸಿದ್ದಾಳೆ.

ಮಠದ ಹಾಸ್ಟೆಲ್‌ನಲ್ಲಿದ್ದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ದೃಢಪಟ್ಟಿದ್ದು, ಮಕ್ಕಳು ಮತ್ತು ಕುಟುಂಬಸ್ಥರ ಅನುಕಂಪ, ಗೌರವ ಗಳಿಸಿ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ರಶ್ಮಿ ಮೂಲಕ ಮಕ್ಕಳನ್ನು ಕೊಠಡಿಗೆ ಕರೆಸಿಕೊಂಡು ಮತ್ತು ಭರಿಸುವ ಚಾಕ್ಲೆಟ್ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಸದ್ಯ ಪೊಲೀಸರು, ಕಲಂ 376(C), 376(2)(n), 376(AB), 376(3), r/w 34, ಐಪಿಸಿ ಮತ್ತು u/s 5(L), 6,7 POCSO Act -2012 ಮತ್ತು sec : 3(f), ಧಾರ್ಮಿಕ‌ ಕೇಂದ್ರ ದುರ್ಬಳಕೆ 1988 ಮತ್ತು sec 77 Juvenile Justice Act 2015, ಸಂತ್ರಸ್ತರು ಸಿಆರ್ಪಿಸಿ 161, 164 ಅಡಿ ನೀಡಿದ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಕಲಂ 173 (8) ಸಿಆರ್ಪಿಸಿ ಅಡಿಯಲ್ಲಿ ತನಿಖೆ ಮುಂದುವರೆದಿದೆ ಎಂದು ಮಾಹಿತಿ ಲಭ್ಯವಾಗಿದೆ. ದೂರಿನಲ್ಲಿ ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ದೃಢಪಟ್ಟಿಲ್ಲ. ಮುರುಘಾಶ್ರೀ ವಿರುದ್ಧ ಪಿತೂರಿ ಕೇಸ್ ಕೌಂಟರ್ ಬ್ಲಾಸ್ಟ್ ಕೇಸ್ ಎಂದು ಕಂಡು ಬರುತ್ತದೆ. ಬಾಕಿ ತನಿಖೆ ಪೂರ್ಣಗೊಳಿಸಿ ಅಂತಿಮ ಚಾರ್ಜ್ ಶೀಟ್ ಸಲ್ಲಿಕೆ ಮಡಲು ಪೊಲೀಸರು ಸಜ್ಜಾಗುತ್ತಿದ್ದಾರೆ.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2ನೇ ಫೋಕ್ಸೋ ಪ್ರಕರಣ ಅಕ್ಟೋಬರ್ 13ರಂದು ದಾಖಲಾಗಿತ್ತು. ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಮಠದ ಉತ್ತರಾಧಿಕಾರಿ (ಬಸವಾದಿತ್ಯ 17), ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ‌ ಗಂಗಾಧರ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿತ್ತು. ಬಳಿಕ ಮಠದ ಅಡುಗೆ ಸಹಾಯಕಿ, ಮಠದ ಹಾಸ್ಟೆಲ್ ನಲ್ಲಿದ್ದ ತನ್ನ ಇಬ್ಬರು ಮಕ್ಕಳು, ಮತ್ತಿಬ್ಬರು ಮಕ್ಕಳು ಸೇರಿ ನಾಲ್ವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರು ದಾಖಲಿಸಿದ್ದರು.

About Author

Leave a Reply

Your email address will not be published. Required fields are marked *

You may have missed