ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ರಸ್ತೆ ಅಗಲೀಕರಣ ಕಾಮಗಾರಿ: ಹೈಕೋರ್ಟ್ಗೆ ಮಾಹಿತಿ ನೀಡಿದ ಬಿಬಿಎಂಪಿ

0

ಬೆಂಗಳೂರು: ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್​​ವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ಶೇ.95ರಷ್ಟು ಮುಗಿದಿದೆ ಎಂದು ಬಿಬಿಎಂಪಿಯು ಬೆಂಗಳೂರಿನ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ, ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠಕ್ಕೆ ಬಿಬಿಎಂಪಿ ಪ್ರಮಾಣ ಪತ್ರ ಸಲ್ಲಿಸಿದೆ.

ರಸ್ತೆ ಅಗಲೀಕರಣ ಕಾಮಗಾರಿ ಶೇ.95 ರಷ್ಟು ಪೂರ್ಣಗೊಂಡಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಿದೆ.

ಈ ಅಂಶವನ್ನು ದಾಖಲಿಸಿಕೊಂಡಿರುವ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ. ಬಿಬಿಎಂಪಿಯ ರಸ್ತೆ ಮೂಲಸೌಕರ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿರ್ ಎಚ್.ಎಸ್.ಪ್ರಿಯದರ್ಶಿನಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಹಿಂದೆ 2023ರ ಜ.20ರಂದು ಸಲ್ಲಿಸಿದ್ದ ಪ್ರಮಾಣ ಪತ್ರದ ಮುಂದುವರಿದ ಭಾಗವಾಗಿ ಈ ಪ್ರಮಾಣ ಪತ್ರ ಸಲ್ಲಿಸಲಾಗುತ್ತಿದೆ. ಎಲ್ಲ ರೀತಿಯಲ್ಲೂ ಶೇ.95ರಷ್ಟು ಕಾಮಗಾರಿ ಪೂರ್ಣಗೊಳಿಸಿ ಆ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed