ತವರು ಮನೆಯಿಂದ 3 ವರ್ಷವಾದ್ರೂ ಹಿಂದಿರುಗದ ಹೆಂಡತಿ: ವಿಚ್ಛೇದನ ಎತ್ತಿಹಿಡಿದ ಹೈಕೋರ್ಟ್

0

ಬೆಂಗಳೂರು: ಮದುವೆಯಾಗಿ 3 ವರ್ಷವಾದ್ರೂ ಪತ್ನಿ ಮನೆಗೆ ಹಿಂದಿರುಗದ ಹಿನ್ನೆಲೆ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಬೆಂಗಳೂರಿನ ಹೈಕೋರ್ಟ್ ಎತ್ತಿಹಿಡಿದಿದೆ. ರಾಜಧಾನಿ ಬೆಂಗಳೂರಿನ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ದ್ವಿಸದಸ್ಯ ಪೀಠ ಈ ಆದೇಶ ಮಾಡಿದೆ.

ಪರಿತ್ಯಾಗದ ಆಧಾರದಲ್ಲಿ ವಿಚ್ಛೇದನ ಕೋರಿ ಪತಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕೌಟುಂಬಿಕ ನ್ಯಾಯಾಲಯದಿಂದ ಅರ್ಜಿದಾರ ಮಹಿಳೆಗೆ ನೋಟಿಸ್ ಜಾರಿಯಾಗಿದೆ. ಆ ಪ್ರಕರಣದಲ್ಲಿ ಮಹಿಳೆ ವಕೀಲರನ್ನು ನಿಯೋಜಿಸಿಕೊಂಡಿದ್ದಾರೆ.

ಆದರೂ, ಪತಿಯ ಅರ್ಜಿಗೆ ಯಾವುದೇ ಆಕ್ಷೇಪಣೆ ಸಲ್ಲಿಸಿಲ್ಲ. ಪತಿಯ ಅರ್ಜಿಗೆ ಪತ್ನಿ ಸೂಕ್ತವಾಗಿ ಉತ್ತರ ನೀಡದಿದ್ದಾಗ, ಗಂಡನ ಹೇಳಿಕೆಗಳನ್ನೇ ಪರಿಗಣಿಸಬೇಕಾಗುತ್ತದೆ. ಆದ್ದರಿಂದ, ಕೌಟುಂಬಿಕ ನ್ಯಾಯಾಲಯವು, ಪತ್ನಿ ಸತತವಾಗಿ ಎರಡು ವರ್ಷಕ್ಕೂ ಅಧಿಕ ಸಮಯದಿಂದ ಪತ್ನಿ ದೂರ ಇರುವುದರಿಂದ ಪತಿಯನ್ನು ಪರಿತ್ಯಾಗ ಮಾಡಿರುವುದು ಸಾಬೀತಾಗಿದೆ ಎಂಬ ತೀರ್ಮಾನಕ್ಕೆ ಬಂದಿದೆ. ಕೌಟುಂಬಿಕ ನ್ಯಾಯಾಲಯದ ಆದೇಶ ಸೂಕ್ತವಾಗಿದ್ದು, ಅದರಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡು ಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟು ಪತ್ನಿಯ ಅರ್ಜಿ ವಜಾಗೊಳಿಸಿದೆ.

About Author

Leave a Reply

Your email address will not be published. Required fields are marked *

You may have missed