ಇಂಡಿಗೊ ವಿಮಾನದಲ್ಲಿ ಸಿಗರೇಟ್ ಸೇದಿ ಆತಂಕ ತಂದೊಡ್ಡಿದ ಯುವತಿ ಅರೆಸ್ಟ್ ..!

0

ಬೆಂಗಳೂರು: ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ಮಹಿಳೆಯನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಿಯಾಂಕಾ ಚಕ್ರವರ್ತಿ ಬಂಧಿತ ಮಹಿಳೆ. ಪ್ರಿಯಾಂಕಾ ಚಕ್ರವರ್ತಿ ಭಾನುವಾರ ತಡರಾತ್ರಿ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದರು.

ವಿಮಾನವು ಕೋಲ್ಕತ್ತಾದಿಂದ ರಾತ್ರಿ 9.50 ಕ್ಕೆ ಹೊರಟು ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರು ತಲುಪಿದೆ. ವಿಮಾನ ಲ್ಯಾಂಡ್‌ ಆಗುವ 30 ನಿಮಿಷ ಮೊದಲು ಪ್ರಿಯಾಂಕಾ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.

ಪ್ರಿಯಾಂಕಾ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದಾರೆ ಎಂದು ಶಂಕಿಸಿದ ವಿಮಾನ ಸಿಬ್ಬಂದಿ ಆಕೆಯನ್ನು ಬಾಗಿಲು ತೆರೆಯುವಂತೆ ಕೇಳಿದ್ದಾರೆ. ಶೌಚಾಲಯದ ಡಸ್ಟ್‌ಬಿನ್‌ನಲ್ಲಿ ಸಿಗರೇಟ್ ಪತ್ತೆಯಾಗಿದೆ. ಬಳಿಕ ಸಿಬ್ಬಂದಿ ಡಸ್ಟ್‌ಬಿನ್‌ಗೆ ನೀರು ಸುರಿದರು. ವಿಮಾನದ ಕ್ಯಾಪ್ಟನ್ ಪ್ರಿಯಾಂಕಾ ಅವರನ್ನು ಅಶಿಸ್ತಿನ ಪ್ರಯಾಣಿಕ ಎಂದು ಘೋಷಿಸಿದರು. ವಿಮಾನ ಲ್ಯಾಂಡ್ ಆದ ಕೂಡಲೇ ಸಿಬ್ಬಂದಿ ಪ್ರಿಯಾಂಕಾ ಅವರನ್ನು ವಿಮಾನ ನಿಲ್ದಾಣದ ಭದ್ರತಾ ವಿಭಾಗಕ್ಕೆ ಒಪ್ಪಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed